ಬೆಂಗಳೂರು: ‘ಯಲಹಂಕದಲ್ಲಿ ಕ್ರೀಡಾ ವಿಶ್ವವಿದ್ಯಾಲಯಕ್ಕೆ 100 ಎಕರೆ ಭೂಮಿ ಗುರುತಿಸಲಾಗಿದೆ. ರಾಜ್ಯದ 15 ಕಡೆ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕ್ರೀಡಾ ಹಾಸ್ಟೆಲ್ ನಿರ್ಮಿಸುತ್ತಿದ್ದು, ಟೆಂಡರ್ ಆಹ್ವಾನಿಸಲಾಗಿದೆ’ ಎಂದು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ಸಿನ ಕೆ. ಗೋವಿಂದರಾಜು ಪ್ರಸ್ತಾಪಿಸಿದ ವಿಷಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಅವರು, ‘₹ 1,000 ಕೋಟಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಳಿ ಬೇಡಿಕೆ ಇಟ್ಟಿದ್ದೇನೆ. ಇಷ್ಟು ಅನುದಾನ ಸಿಕ್ಕಿದರೆ ಕ್ರೀಡಾ ಕ್ಷೇತ್ರದ ಶೇ 70ರಷ್ಟು ಬೇಡಿಕೆ ಈಡೇರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಇಲಾಖೆಗೆ ಅನುದಾನದ ಕೊರತೆ ಇದೆ. ಈ ಬಗ್ಗೆ ಮುಖ್ಯಮಂತ್ರಿ ಬಳಿ ಚರ್ಚಿಸುತ್ತಲೇ ಇದ್ದೇನೆ. ಕೆಲವೇ ತಿಂಗಳಲ್ಲಿ ವಿಜಯಪುರದ ಸೈಕ್ಲಿಂಗ್ ವೆಲೊಡ್ರೊಮ್ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ. ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾ ಮ್ಯೂಸಿಯಂ ಮಾಡುವ ಸಿದ್ಧತೆ ನಡೆದಿದೆ’ ಎಂದರು.

ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಮಾತನಾಡಿ ‘ಪ್ರತಿ ಕಾಲೇಜಿನಲ್ಲಿ ಕ್ರೀಡಾ ತರಬೇತುದಾರರನ್ನು ನೇಮಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.