ಚಿತ್ರದುರ್ಗ: ಇಲ್ಲಿನ ಎಸ್‌ಜೆಎಂಟಿ ಕಾಲೇಜು ಆವರಣದಲ್ಲಿ ಮೂರು ದಿನ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಥ್ರೋಬಾಲ್ ಪಂದ್ಯದಲ್ಲಿ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ಪ್ರಥಮ ಸ್ಥಾನ ಪಡೆದಿದೆ.

ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ ಬಸವೇಶ್ವರ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ವಿಜೇತ ತಂಡಗಳಿಗೆ ಶನಿವಾರ ರಾತ್ರಿ ಬಹುಮಾನ ವಿತರಣೆ ಮಾಡಲಾಯಿತು.

ಪುರುಷರ ವಿಭಾಗದಲ್ಲಿ ನಡೆದ ಪಂದ್ಯದಲ್ಲಿ ಬಸವೇಶ್ವರ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಶಿವಮೊಗ್ಗದ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ತಂಡವನ್ನು ಮಣಿಸಿದರು. ಮಹಿಳೆಯರ ವಿಭಾಗದಲ್ಲಿ ಬಸವೇಶ್ವರ ಕಾಲೇಜು ತಂಡವು ಬೆಂಗಳೂರಿನ ಸಪ್ತಗಿರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ತಂಡವನ್ನು ಸೋಲಿಸಿತು.

ಪ್ರಾಂಶುಪಾಲ ಡಾ.ಜಿ.ಪ್ರಶಾಂತ್, ರೋಗ ವಿಧಾನಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಸಿ.ನಾರಾಯಣಮೂರ್ತಿ, ಸಿ.ಅಭಯ್ ಪ್ರಕಾಶ್, ವಿಶ್ವವಿದ್ಯಾಲಯದ ವೀಕ್ಷಕರಾದ ಡಾ. ಜೋಸೆಫ್ ಅನಿಲ್ ಕುಮಾರ್, ಗೋಪಾಲಕೃಷ್ಣ, ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.