ನವದೆಹಲಿ: ನಮ್ಮ ಕುಸ್ತಿಪಟುಗಳ ಜತೆ ನಡೆದಿರುವ ವಿಷಯ ಕೇಳಿ ಬೇಸರವಾಯಿತು, ಸರಿಯಾದ ಮಾತುಕತೆ ಮೂಲಕ ವಿಷಯವನ್ನು ಪರಿಹರಿಸಬಹುದಾಗಿದೆ. ಆದಷ್ಟೂ ಬೇಗ ಸಮಸ್ಯೆ ಪರಿಹಾರವಾಗಲಿ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅನಿಲ್ ಕುಂಬ್ಳೆ ಹೇಳಿದ್ದಾರೆ.

ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ಸ್ಥಳದಿಂದ ಅವರನ್ನು ಬಲವಂತವಾಗಿ ತೆರವು ಮಾಡಿಲಾಗಿತ್ತು. ಈ ವೇಳೆ ಪೊಲೀಸರು ಹಾಗೂ ಕುಸ್ತಿಪಟುಗಳ ನಡೆವೆ ಘರ್ಷಣೆ ಉಂಟಾಗಿ ಕುಸ್ತಿಪಟುಗಳ ಮೇಲೆ ಹಲ್ಲೆಯಾಗಿತ್ತು.

ಮೇ 28ರಂದು ನಮ್ಮ ಕುಸ್ತಿಪಟುಗಳ ಜತೆ ನಡೆದಿರುವ ವಿಷಯ ಕೇಳಿ ಬೇಸರವಾಯಿತು. ಸರಿಯಾದ ಮಾತುಕತೆ ಮೂಲಕ ಯಾವುದೇ ವಿಷಯವನ್ನೂ ಪರಿಹರಿಸಬಹುದು. ಆದಷ್ಟು ಬೇಗ ಸಮಸ್ಯೆ ಪರಿಹಾರವಾಗಲಿ ಎಂದು ಆಶಿಸುತ್ತಿರುವುದಾಗಿ ಎಂದು ಅನಿಲ್ ಕುಂಬ್ಳೆ ಟ್ವೀಟ್ ಮಾಡಿದ್ದಾರೆ.

ಸಿಂಗ್ ಬಂಧನಕ್ಕೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಯ ಭಾಗ ವಾಗಿ, ಒಲಿಂಪಿಕ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಾವು ಗೆದ್ದಿರುವ ಪದಕಗಳನ್ನು ಗಂಗಾ ನದಿಯಲ್ಲಿ ಹಾಕಲು ಮಂಗಳವಾರ ಹರಿದ್ವಾರಕ್ಕೆ ಬಂದಿದ್ದರು. ನಂತರ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ನರೇಶ್ ಟಿಕಾಯತ್ ಅವರು ಕುಸ್ತಿಪಟುಗಳ ಮನವೊಲಿಸಿ, ಪದಕಗಳನ್ನು ನದಿಯಲ್ಲಿ ಹಾಕದಂತೆ ನೋಡಿಕೊಂಡರು.

ಇದೇ ವೇಳೆ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕುಸ್ತಿಪಟುಗಳು ಸರ್ಕಾರಕ್ಕೆ ಐದು ದಿನಗಳ ಗಡುವು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.