ನವದೆಹಲಿ: ‘ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಚಿನ್ನ ಗೆದ್ದು ನಮ್ಮ ಸಾಮರ್ಥ್ಯ ಏನೆಂಬುದನ್ನು ಸಾಬೀತುಪಡಿಸಲು ಆಗಿರುವುದು ಸಂತಸ ಉಂಟುಮಾಡಿದೆ’ ಎಂದು ಭಾರತ ಮಹಿಳಾ ಹಾಕಿ ತಂಡದ ನಾಯಕಿ ಸವಿತಾ ಪೂನಿಯಾ ಹೇಳಿದ್ದಾರೆ.

‘ಸ್ಪಷ್ಟ ಗುರಿಯೊಂದಿಗೆ ಈ ಟೂರ್ನಿಯಲ್ಲಿ ಆಡಲಿಳಿದಿದ್ದೆವು. ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಗೆಲ್ಲಲು ಸಾಧ್ಯವಾಗಿರಲಿಲ್ಲ. ಆ ನಿರಾಸೆಯಿಂದ ಹೊರಬರಲು ಚಾಂಪಿಯನ್ಸ್ ಟ್ರೋಫಿಯಲ್ಲಿ ಚಿನ್ನ ಗೆಲ್ಲಲೇಬೇಕಿತ್ತು. ಅದರಲ್ಲಿ ಯಶಸ್ವಿಯಾಗಿದ್ದೇವೆ’ ಎಂದಿದ್ದಾರೆ.

ಭಾನುವಾರ ರಾಂಚಿಯಲ್ಲಿ ನಡೆದ ಫೈನಲ್ನಲ್ಲಿ ಭಾರತ ತಂಡ 4–0 ಗೋಲುಗಳಿಂದ ಜಪಾನ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿತ್ತು. ಹಾಂಗ್ಝೌ ಏಷ್ಯನ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ನಲ್ಲಿ ಸೋತಿದ್ದ ಭಾರತ, ಕಂಚಿನ ಪದಕ ಜಯಿಸಿತ್ತು.

‘ಎಫ್ಐಎಚ್ ಹಾಕಿ ಒಲಿಂಪಿಕ್ಸ್ ಅರ್ಹತಾ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವುದು ನಮ್ಮ ಮುಂದಿನ ಗುರಿ. ಆ ಟೂರ್ನಿಗೆ ಸಜ್ಜಾಗಲು ಸಾಕಷ್ಟು ಸಮಯಾವಕಾಶ ಇದೆ’ ಎಂದರು.

‘ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆಯುವ ಸಾಮರ್ಥ್ಯವನ್ನು ನಮ್ಮ ತಂಡ ಹೊಂದಿದೆ. ಈ ಟೂರ್ನಿಯಲ್ಲಿ ತೋರಿದ ಪ್ರದರ್ಶನವನ್ನು ಎರಡು ತಿಂಗಳ ಬಳಿಕ ನಡೆಯಲಿರುವ ಒಲಿಂಪಿಕ್ಸ್ ಅರ್ಹತಾ ಟೂರ್ನಿಯಲ್ಲೂ ತೋರಬೇಕು’ ಎಂದು ಮುಖ್ಯ ಕೋಚ್ ಯಾನೆಕ್ ಶೋಪ್ಮನ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.