ನವದೆಹಲಿ: ಕ್ರೀಡೆಯನ್ನು ರಾಜಕೀಯಗೊಳಿಸಬಾರದು ಎಂಬ ಉದ್ದೇಶದೊಂದಿಗೆ ಜಂತರ್ ಮಂತರ್ನಲ್ಲಿ ಪ್ರತಿಭಟನಾ ವೇದಿಕೆಗೆ ಆಗಮಿಸಿದ್ದ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಅವರನ್ನು ಕುಸ್ತಿಪಟುಗಳು ವೇದಿಕೆಯಿಂದ ಕೆಳಗಿಳಿಸಿರುವ ಘಟನೆ ಗುರುವಾರ ನಡೆದಿದೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ಟ್ವೀಟ್ ಮಾಡಿದೆ.

ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಜಾಕ್ಕೆ ಆಗ್ರಹಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಇದನ್ನೂ ಓದಿ: Wrestlers Protest | ಕ್ರೀಡಾಪಟುಗಳು ದೇಶದ ಹೆಮ್ಮೆ: ತನಿಖೆಗೆ ಪ್ರಿಯಾಂಕಾ ಆಗ್ರಹ

ಇದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಆದರೆ ಈ ಪ್ರಕರಣವನ್ನು ರಾಜಕೀಯಗೊಳಿಸಬಾರದು ಎಂದು ಕೈಮುಗಿದುಕೊಂಡು ಬೇಡುತ್ತೇನೆ ಎಂದು ಹೇಳಿರುವ ಕುಸ್ತಿಪಟು ಬಜರಂಗ್ ಪೂನಿಯಾ, ದಯವಿಟ್ಟು ವೇದಿಕೆಯಿಂದ ಕೆಳಗಿಳಿಯಿರಿ ಎಂದು ಬೃಂದಾ ಕಾರಟ್ ಅವರನ್ನು ವಿನಂತಿಸಿದ್ದಾರೆ.

ಬಿಜೆಪಿ ಸಂಸದರೂ ಆಗಿರುವ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಸರ್ವಾಧಿಕಾರಿ ಧೋರಣೆ ವಿರುದ್ಧ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವೂ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.