ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಜಾಕ್ಕೆ ಆಗ್ರಹಿಸಿ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಗುರುವಾರವೂ ಮುಂದುವರಿದಿದೆ.

ಟೋಕಿಯೊ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ವಿಶ್ವ ಚಾಂಪಿಯನ್ಷಿಪ್ ಪದಕ ವಿಜೇತ ಕುಸ್ತಿಪಟು ವಿನೇಶಾ ಪೋಗಟ್ ಸೇರಿದಂತೆ ಅನೇಕ ಹಿರಿಯ ಹಾಗೂ ಕಿರಿಯ ಕುಸಿಪಟುಗಳು ಜಂತರ್ ಮಂಥರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಇದನ್ನೂ ಓದಿ: WFI ಅಧ್ಯಕ್ಷ ಬ್ರಿಜ್ಭೂಷಣ್ ವಿರುದ್ಧ ತೊಡೆ ತಟ್ಟಿದ ಖ್ಯಾತನಾಮ ಪೈಲ್ವಾನರು

ಬಿಜೆಪಿ ಸಂಸದರೂ ಆಗಿರುವ ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಅವರ ಮೇಲೆ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪವೂ ಇದೆ. ಆದರೆ ಈ ಎಲ್ಲ ಆರೋಪಗಳನ್ನು ಸಿಂಗ್ ನಿರಾಕರಿಸಿದ್ದಾರೆ.

ಡಬ್ಲ್ಯುಎಫ್ಐ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ (ಎಸ್ಎಐ) ಕುಸ್ತಿಪಟುಗಳು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.