ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ಭೂಷಣ್ ಶರಣ್ ಸಿಂಗ್ ಮೇಲಿನ ಆರೋಪಗಳ ತನಿಖೆಗೆ ಕ್ರೀಡಾ ಸಚಿವಾಲಯ ನೇಮಿಸಿರುವ ಮೇಲುಸ್ತುವಾರಿ ಸಮಿತಿಯಲ್ಲಿ ಕಾಮನ್ವೆಲ್ತ್ ಕೂಟದ ಚಿನ್ನದ ಪದಕ ವಿಜೇತ ಕುಸ್ತಿಪಟು ಬಬಿತಾ ಪೋಗಟ್ ಅವರಿಗೆ ಸ್ಥಾನ ನೀಡಲಾಗಿದೆ.

‘ಡಬ್ಲ್ಯುಎಫ್ಐ ಆಡಳಿತ ನೋಡಿಕೊಳ್ಳಲು ನೇಮಿಸಿರುವ ಸಮಿತಿಗೆ ಕುಸ್ತಿಪಟು ಬಬಿತಾ ಪೋಗಟ್ ಅವರನ್ನೂ ಸೇರಿಸಿಕೊಳ್ಳಲಾಗಿದೆ’ ಎಂದು ಕ್ರೀಡಾ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಇದರಿಂದ ಬಾಕ್ಸರ್ ಎಂ.ಸಿ.ಮೇರಿಕೋಮ್ ನೇತೃತ್ವದ ಸಮಿತಿಯಲ್ಲಿರುವ ಸದಸ್ಯರ ಸಂಖ್ಯೆ ಆರಕ್ಕೇರಿದೆ.

ವಿನೇಶಾ ಪೋಗಟ್, ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಮತ್ತು ರವಿ ದಹಿಯಾ ಒಳಗೊಂಡಂತೆ ಕುಸ್ತಿಪಟುಗಳು ಬ್ರಿಜ್ಭೂಷಣ್ ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.