ಚೆನ್ನೈ: ಭಾರತದ ಟೆನಿಸ್ ಆಟಗಾರ ಸುಮಿತ್ ನಗಾಲ್ ಅವರು ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್ನ ಪುರುಷರ ಸಿಂಗಲ್ಸ್ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾರೆ.

26 ವರ್ಷದ ನಗಾಲ್ ಅವರಿಗೆ ಇದು ಎರಡನೇ ಒಲಿಂಪಿಕ್ ಕೂಟವಾಗಿದೆ. 2020ರ ಟೋಕಿಯೊ ಕೂಟಕ್ಕೂ ಅರ್ಹತೆ ಪಡೆದಿದ್ದ ಅವರು, ಅಲ್ಲಿ ಎರಡನೇ ಸುತ್ತು ಪ್ರವೇಶಿಸಿದ್ದರು.

‘2024ರ ಪ್ಯಾರಿಸ್ ಒಲಿಂಪಿಕ್ಸ್ಗೆ ಅಧಿಕೃತವಾಗಿ ಅರ್ಹತೆ ಪಡೆದಿದ್ದೇನೆ ಎಂದು ತಿಳಿಸಲು ಖುಷಿಯಾಗುತ್ತಿದೆ. ನನ್ನ ಪಾಲಿಗೆ ಅವಿಸ್ಮರಣೀಯ ಕ್ಷಣ’ ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾಗವಹಿಸಿರುವುದು ನನ್ನ ವೃತ್ತಿಜೀವನದ ಮಹತ್ವದ ಗಳಿಗೆ. ನಂತರದಲ್ಲಿ ಪ್ಯಾರಿಸ್ ಕೂಟಕ್ಕೆ ಅರ್ಹತೆ ಪಡೆಯುವುದು ದೊಡ್ಡ ಗುರಿಯಾಗಿತ್ತು. ರೋಲ್ಯಾಂಡ್ ಗ್ಯಾರೋ ಸ್ನಲ್ಲಿ ಆಡುವ ಕ್ಷಣಕ್ಕಾಗಿ ಎದುರು ನೋಡುತ್ತಿದ್ದೇನೆ’ ಎಂದಿದ್ದಾರೆ.

ಜೂನ್ 10ರ ವರೆಗಿನ ಐಟಿಎಫ್ ರ್ಯಾಂಕಿಂಗ್ ಆಧಾರದಲ್ಲಿ ನಗಾಲ್ ಅವರಿಗೆ ಒಲಿಂಪಿಕ್ಸ್ಗೆ ಅರ್ಹತೆ ದೊರಕಿದೆ ಎಂದು ಅಖಿಲ ಭಾರತ ಟೆನಿಸ್ ಸಂಸ್ಥೆ (ಎಐಟಿಎ) ಹೇಳಿದೆ.

ನಗಾಲ್ ಅವರು ಹೀಲ್ಬ್ರಾನ್ ನೆಕರ್ಕಪ್ ಎಟಿಪಿ ಚಾಲೆಂಜರ್ ಟೂರ್ನಿಯಲ್ಲಿ ಚಾಂಪಿಯನ್ ಆಗುವ ಜೊತೆಗೆ ಎಟಿಪಿ ರ್ಯಾಂಕಿಂಗ್ನಲ್ಲಿ ಅಗ್ರ 80ರೊಳಗೆ ಸ್ಥಾನ ಪಡೆದಿದ್ದರು.

ಕನ್ನಡಿಗ ರೋಹನ್ ಬೋಪಣ್ಣ ಮತ್ತು ಎನ್. ಶ್ರೀರಾಮ್ ಬಾಲಾಜಿ ಜೋಡಿಯು ಪುರುಷರ ಡಬಲ್ಸ್ನಲ್ಲಿ ಪ್ಯಾರಿಸ್ ಕೂಟದಲ್ಲಿ ಕಣಕ್ಕೆ ಇಳಿಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.