ಲಖನೌ: ಶ್ರೀಲಂಕಾ ವಿರುದ್ಧ ಮೊದಲ ಪಂದ್ಯದಲ್ಲಿ ಭರ್ಜರಿ ಜಯಗಳಿಸಿದ ಹುಮ್ಮಸ್ಸಿನಲ್ಲಿರುವ ದಕ್ಷಿಣ ಆಫ್ರಿಕಾ ತಂಡ, ಇಂದಿನ ವಿಶ್ವಕಪ್ ಪಂದ್ಯದಲ್ಲಿ (ಗುರುವಾರ) ಆಸ್ಟ್ರೇಲಿಯಾಗೆ 312 ರನ್ಗಳ ಗೆಲುವಿನ ಗುರಿ ನೀಡಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 311 ರನ್ ಗಳಿಸಿತು.

ಕ್ವಿಂಟನ್ ಡಿ ಕಾಕ್ ಅಮೋಘ ಶತಕ ಸಿಡಿಸಿದರು. ಏಡನ್ ಮರ್ಕರಂ 56 ರನ್ ಬಾರಿಸುವ ಮೂಲಕ ತಂಡದ ಮೊತ್ತ 300ರ ಗಡಿ ದಾಟಲು ನೆರವಾದರು.

ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್, ಗ್ಲೆನ್ ಮ್ಯಾಕ್ಸ್ವೆಲ್ ತಲಾ ಎರಡು ವಿಕೆಟ್ ಪಡೆದು ಗಮನ ಸೆಳೆದರು. ಆಸ್ಟ್ರೇಲಿಯಾ ಈ ಪಂದ್ಯವನ್ನು ಗೆಲ್ಲಬೇಕಾದರೆ 312 ರನ್ ಗಳಿಸಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.