ಅಹಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.

ಕುತೂಹಲಕಾರಿ ಅಂಶ ಏನೆಂದರೆ, ಪ್ರಸಕ್ತ ಸಾಲಿನಲ್ಲೇ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲೂ ಇತ್ತಂಡಗಳು ಮುಖಾಮುಖಿಯಾಗಿದ್ದವು. ಅಂದು ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವನ್ನು ಮಣಿಸಿದ್ದ ಪ್ಯಾಟ್ ಕಮಿನ್ಸ್ ಬಳಗವು ಪ್ರಶಸ್ತಿಗೆ ಮುತ್ತಿಕ್ಕಿತ್ತು. ವರ್ಷಾರಂಭದಲ್ಲಿ ಇಂಗ್ಲೆಂಡ್ನ ಓವಲ್ ಮೈದಾನದಲ್ಲಿ ನಡೆದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಭಾರತ 209 ರನ್ ಅಂತರದಿಂದ ಆಸೀಸ್ಗೆ ಮಣಿದಿತ್ತು.
.ಕಿಕ್ಕಿರಿದು ತುಂಬಿರುವ 1.3 ಲಕ್ಷ ಅಭಿಮಾನಿ ಬಳಗವನ್ನು ಮೌನವಾಗಿಸುವ ಗುರಿ: ಕಮಿನ್ಸ್.2011ರಲ್ಲಿ ಸಿಗಲಿಲ್ಲ ಸ್ಥಾನ, 2023ರಲ್ಲಿ ರೋಹಿತ್ ನಾಯಕತ್ವದಲ್ಲಿ ಭಾರತ ಫೈನಲ್ಗೆ .
ಈಗ ರೋಹಿತ್ ಹಾಗೂ ಕಮಿನ್ಸ್ ನಡುವೆ ಮಗದೊಂದು ಫೈನಲ್ ಪಂದ್ಯ ಏರ್ಪಟ್ಟಿದೆ. ಈ ಬಾರಿಯ ಏಕದಿನ ವಿಶ್ವಕಪ್ನಲ್ಲಿ ಅಜೇಯ ಓಟ ಮುಂದುವರಿಸಿರುವ ಟೀಮ್ ಇಂಡಿಯಾ ಗೆಲುವಿನ ವಿಶ್ವಾಸದಲ್ಲಿದೆ. ಭಾರತ ಕ್ರಿಕೆಟ್ ತಂಡದ ಕೋಟ್ಯಂತರ ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದು, ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಏಕದಿನ ಕ್ರಿಕೆಟ್ನಲ್ಲಿ ಭಾರತ ಮೂರನೇ ವಿಶ್ವಕಪ್ ಗೆಲ್ಲುವ ತವಕದಲ್ಲಿದೆ. ಆ ಮೂಲಕ ಕಪಿಲ್ ದೇವ್ ಹಾಗೂ ಮಹೇಂದ್ರ ಸಿಂಗ್ ಧೋನಿ ಸಾಲಿಗೆ ರೋಹಿತ್ ಶರ್ಮಾ ಸೇರ್ಪಡೆಗೊಳ್ಳಲಿದ್ದಾರೆ. ಭಾರತ ಕೊನೆಯದಾಗಿ 2011ರಲ್ಲಿ ತವರಿನಲ್ಲೇ ನಡೆದ ಏಕದಿನ ವಿಶ್ವಕಪ್ ಜಯಿಸಿತ್ತು.

20 ವರ್ಷಗಳ ಹಿಂದೆ ಇದೇ ಆಸ್ಟ್ರೇಲಿಯಾ ತಂಡದ ವಿರುದ್ಧ ಫೈನಲ್ನಲ್ಲಿ ಸೋತಿದ್ದ ಭಾರತ ತಂಡ ರನ್ನರ್-ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಅಂದು ಸೌರವ್ ಗಂಗೂಲಿ ನೇತೃತ್ವದ ಭಾರತ ತಂಡವನ್ನು ರಿಕಿ ಪಾಂಟಿಂಗ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಮಣಿಸಿತ್ತು.

2007ರಲ್ಲಿ ಚೊಚ್ಚಲ ಟ್ವೆಂಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ಸದಸ್ಯರಾಗಿದ್ದ ರೋಹಿತ್ 2007ರಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಈಗ 12 ವರ್ಷಗಳ ಬಳಿಕ ಭಾರತಕ್ಕೆ ವಿಶ್ವಕಪ್ ದೊರಕಿಸಿಕೊಡುವ ವಿಶ್ವಾಸದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.