ಲಖನೌ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಭಾನುವಾರ) ಭಾರತ ಮತ್ತು ಇಂಗ್ಲೆಂಡ್ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದ ಹಾಲಿ ಚಾಂಪಿಯನ್ ಇಂಗ್ಲೆಂಡ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿತು. ನಾಯಕ ರೋಹಿತ್ ಶರ್ಮಾ 87, ಸೂರ್ಯಕುಮಾರ್ ಯಾದವ್ 49, ಕೆ.ಎಲ್. ರಾಹುಲ್ 39 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ಬ್ಯಾಟಿಂಗ್ ವೈಫಲ್ಯ

ಭಾರತ ಪರ ಆರಂಭಿಕ ಆಟಗಾರ ಶುಭಮನ್ ಗಿಲ್ 09, ವಿರಾಟ್ ಕೊಹ್ಲಿ 00, ಶ್ರೇಯಸ್ ಅಯ್ಯರ್ 04, ರವೀಂದ್ರ ಜಡೇಜ 08 ರನ್ ಗಳಿಸುವ ಮೂಲಕ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.

ಇಂಗ್ಲೆಂಡ್ ಪರ ಡೇವಿಡ್ ವಿಲಿ 3, ಕ್ರಿಸ್ ವೋಕ್ಸ್ ಹಾಗೂ ಆದಿಲ್ ರಶೀದ್ ತಲಾ ಎರಡು ವಿಕೆಟ್ ಕಬಳಿಸಿದರೆ, ಮಾರ್ಕ್ ವುಡ್ ಒಂದು ವಿಕೆಟ್ ಪಡೆದರು.
.ಹಿಮದಂಗಳದಲ್ಲಿ ರನ್ ಪ್ರವಾಹ | ಮನಗೆದ್ದ ಕಿವೀಸ್ ಆಟ; ಕಮಿನ್ಸ್ ಬಳಗಕ್ಕೆ ರೋಚಕ ಜಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.