ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ ಏಳನೇ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಸೆಮಿಫೈನಲ್‌ಗೆ ಪ್ರವೇಶಿಸಿದೆ.

ಈ ಮೂಲಕ ಈ ಬಾರಿಯ ವಿಶ್ವಕಪ್‌ನಲ್ಲಿ ಸೆಮಿಫೈನಲ್‌ಗೆ ಪ್ರವೇಶಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈವರೆಗೆ ಆಡಿರುವ ಏಳು ಪಂದ್ಯಗಳಲ್ಲಿ ಭಾರತ ಒಟ್ಟು 14 ಅಂಕಗಳನ್ನು ಕಲೆ ಹಾಕಿದೆ. ಭಾರತ ಈಗ ನವೆಂಬರ್ 05 ಭಾನುವಾರದಂದು ಕೋಲ್ಕತ್ತದಲ್ಲಿ ನಡೆಯಲಿರುವ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಸವಾಲನ್ನು ಎದುರಿಸಲಿದೆ. ನವೆಂಬರ್ 12ರಂದು ಬೆಂಗಳೂರಿನಲ್ಲಿ ನಡೆಯಲಿರುವ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ಮತ್ತೊಂದೆಡೆ ಈ ಸೋಲಿನೊಂದಿಗೆ ಲಂಕಾ ಸೆಮಿಫೈನಲ್ ಕನಸು ಬಹುತೇಕ ಕಮರಿದೆ.
.IND vs SL: ರೋಹಿತ್ ಬಳಗದ ಅಬ್ಬರಕ್ಕೆ ಕೊಚ್ಚಿಹೋದ ಲಂಕಾ.ICC World Cup 2023: ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ.
ಮುಂಬೈನ ವಾಂಖೆಡೆ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ 302 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿತು.

ಭಾರತ ಒಡ್ಡಿದ 358 ರನ್ ಗುರಿ ಬೆನ್ನಟ್ಟಿದ ಲಂಕಾ, 19.4 ಓವರ್‌ಗಳಲ್ಲೇ 55 ರನ್ನಿಗೆ ಆಲೌಟ್ ಆಯಿತು.

18 ರನ್ನಿಗೆ ಐದು ವಿಕೆಟ್ ಗಳಿಸಿದ ಮೊಹಮ್ಮದ್ ಶಮಿ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮೊಹಮ್ಮದ್ ಸಿರಾಜ್ ಮೂರು ಮತ್ತು ಜಸ್‌ಪ್ರೀತ್ ಬೂಮ್ರಾ ಒಂದು ವಿಕೆಟ್ ಗಳಿಸಿ ಮಿಂಚಿದರು.

ಈ ಮೊದಲು ಶುಭಮನ್ ಗಿಲ್ (92), ವಿರಾಟ್ ಕೂಹ್ಲಿ (88) ಹಾಗೂ ಶ್ರೇಯಸ್ ಅಯ್ಯರ್ (82) ಅಮೋಘ ಅರ್ಧಶತಕಗಳ ನೆರವಿನಿಂದ ಭಾರತ ತಂಡವು ಎಂಟು ವಿಕೆಟ್ ನಷ್ಟಕ್ಕೆ 357 ರನ್‌ಗಳ ಬೃಹತ್ ಮೊತ್ತ ಪೇರಿಸಿತು.

ಭಾರತದ ಗೆಲುವುಗಳ ಪಟ್ಟಿ:

ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ ಜಯ,

ಅಫ್ಗಾನಿಸ್ತಾನ ವಿರುದ್ಧ 8 ವಿಕೆಟ್ ಜಯ,

ಪಾಕಿಸ್ತಾನ ವಿರುದ್ಧ 7 ವಿಕೆಟ್ ಜಯ,

ಬಾಂಗ್ಲಾದೇಶ ವಿರುದ್ಧ 7 ವಿಕೆಟ್ ಜಯ,

ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಜಯ,

ಇಂಗ್ಲೆಂಡ್ ವಿರುದ್ಧ 100 ರನ್ ಜಯ

ಶ್ರೀಲಂಕಾ ವಿರುದ್ಧ 302 ರನ್ ಜಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.