ಅಹಮದಾಬಾದ್: ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ಅವರು ಈ ಬಾರಿಯ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯದಲ್ಲಿ ಪಂದ್ರಶ್ರೇಷ್ಠ ಪ್ರಶಸ್ತಿ ಪಡೆದರು. ಅದರೊಂದಿಗೆ ಅವರು ಒಂದೇ ಟೂರ್ನಿಯಲ್ಲಿ ಈ ಸಾಧನೆ ಮಾಡಿದ ನಾಲ್ಕನೇ ಕ್ರಿಕೆಟಿಗ ಎಂಬ ಶ್ರೇಯಕ್ಕೆ ಭಾಜನರಾದರು.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು (ನವೆಂಬರ್ 19ರಂದು) ನಡೆದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಆತಿಥೇಯ ಭಾರತದ ಎದುರು 6 ವಿಕೆಟ್ ಅಂತರದ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಹೆಡ್ ಅಮೋಘ ಶತಕ ಬಾರಿಸಿ ಮಿಂಚಿದರು. 120 ಎಸೆತಗಳನ್ನು ಎದುರಿಸಿದ ಅವರು, 15 ಬೌಂಡರಿ ಮತ್ತು 4 ಸಿಕ್ಸರ್ ಸಹಿತ 137 ರನ್ ಚಚ್ಚಿದರು.

ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಅವರು ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಇವರು ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿಯೂ ಈ ಪ್ರಶಸ್ತಿ ಗಿಟ್ಟಿಸಿದ್ದರು. ಹರಿಣಗಳ ತಂಡದ ಎದುರು ಎರಡು ವಿಕೆಟ್ ಹಾಗೂ ಕೇವಲ 48 ಎಸೆತಗಳಲ್ಲಿ 62 ರನ್ ಬಾರಿಸಿದ್ದರು.

ಈ ಹಿಂದೆ 1983ರಲ್ಲಿ ಭಾರತದ ಮೋಹಿಂದರ್ ಅಮರನಾಥ್, 1996ರಲ್ಲಿ ಅರವಿಂದ ಡಿ ಸಿಲ್ವಾ, 1999ರಲ್ಲಿ ಆಸ್ಟ್ರೇಲಿಯಾದ ಶೇನ್ ವಾರ್ನ್ ಈ ಸಾಧನೆ ಮಾಡಿದ್ದರು.
.World Cup Final | ಮೂರಕ್ಕೇರಲಿಲ್ಲ ಭಾರತ; ಆರಕ್ಕೆ ಹಾರಿದ ಆಸ್ಟ್ರೇಲಿಯಾ.World Cup: 250ಕ್ಕಿಂತ ಕಡಿಮೆ ರನ್ ಗಳಿಸಿದ ತಂಡಗಳು ಗೆದ್ದಿರುವುದು 3 ಬಾರಿಯಷ್ಟೇ!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.