ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ನ್ಯೂಜಿಲೆಂಡ್ನ ಯುವ ಭರವಸೆಯ ಎಡಗೈ ಬ್ಯಾಟರ್ ರಚಿನ್ ರವೀಂದ್ರ ಅಮೋಘ ಶತಕ ಗಳಿಸಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ರಚಿನ್ ಸ್ಮರಣೀಯ ಸಾಧನೆ ಮಾಡಿದರು. 94 ಎಸೆತಗಳಲ್ಲಿ 15 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 108 ರನ್ ಗಳಿಸಿದರು.

ಸಚಿನ್ ದಾಖಲೆ ಮುರಿದ ರಚಿನ್...

ಏಕದಿನ ವಿಶ್ವಕಪ್ನಲ್ಲಿ 25 ವರ್ಷಕ್ಕೂ ಮುನ್ನ ಅತಿ ಹೆಚ್ಚು ಶತಕ ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ರಚಿನ್ ಮುರಿದಿದ್ದಾರೆ.

23 ವರ್ಷದ ರಚಿನ್ ಇದು ಏಕದಿನ ವಿಶ್ವಕಪ್ನಲ್ಲಿ ಗಳಿಸಿದ ಮೂರನೇ ಶತಕವಾಗಿದೆ. ಚೊಚ್ಚಲ ವಿಶ್ವಕಪ್ ಆಡುತ್ತಿರುವ ರಚಿನ್ ಈಗಾಗಲೇ ಮೂರು ಶತಕಗಳನ್ನು ಗಳಿಸಿದ್ದಾರೆ. ಮತ್ತೊಂದೆಡೆ 25 ವರ್ಷಕ್ಕೂ ಮುನ್ನ ಸಚಿನ್ ಎರಡು ಶತಕಗಳನ್ನು ಗಳಿಸಿದ್ದರು.

ರಚಿನ್ ಬೆಂಗಳೂರು ನಂಟು...

ರಚಿನ್ ಅವರು ಹುಟ್ಟಿ ಬೆಳೆದದ್ದು ನ್ಯೂಜಿಲೆಂಡ್ನಲ್ಲಾದರೂ, ಬೆಂಗಳೂರು ಜತೆ ನಂಟು ಹೊಂದಿದ್ದಾರೆ. ಅವರ ತಂದೆ, ರವೀಂದ್ರ ಬೆಂಗಳೂರಿನವರು. ಹೆತ್ತವರ ಜತೆ ರಚಿನ್ ಹಲವು ಸಲ ಬೆಂಗಳೂರಿಗೆ ಬಂದಿದ್ದಾರೆ. ರಾಹುಲ್ ದ್ರಾವಿಡ್ ಮತ್ತು ಸಚಿನ್ ತೆಂಡೂಲ್ಕರ್ ಅವರ ಪ್ರೀತಿಯ ಮೇಲೆ ಮಗನಿಗೆ ರಚಿನ್ (ರ ಹಾಗೂ ಚಿನ್) ಎಂಬ ಹೆಸರನ್ನು ಇಟ್ಟಿದ್ದರು.

ರಚಿನ್ ರಚಿನ್...

ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಪಂದ್ಯ ಆಡುವ ಮೂಲಕ ಬೆಂಗಳೂರಿನ ಕ್ರೀಡಾಪ್ರೇಮಿಗಳ ಪ್ರೀತಿಗೆ ರಚಿನ್ ಪಾತ್ರರಾಗಿದ್ದಾರೆ. ಅಲ್ಲದೆ ಅಭಿಮಾನಿಗಳು 'ರಚಿನ್, ರಚಿನ್' ಎಂದು ಜೈಕಾರ ಕೂಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.