ನವದೆಹಲಿ: ವಿಶ್ವಕಪ್ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಿದ ಭಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

‘ಈ ಐತಿಹಾಸಿಕ ವಿಜಯಕ್ಕಾಗಿ ನಾನು ಟೀಂ ಇಂಡಿಯಾವನ್ನು ಅಭಿನಂದಿಸುತ್ತೇನೆ’ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
.World Cup | IND vs PAK: ಪಾಕ್ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಜಯ.
ಅಹಮದಾಬಾದ್‌ನ ಮೊಟೇರಾದ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಭಾರತ ಏಳು ವಿಕೆಟ್‌ಗಳ ಜಯ ಸಾಧಿಸುವ ಮೂಲಕ ವಿಶ್ವಕಪ್ ಏಕದಿನ ಕ್ರಿಕೆಟ್ ಟೂರ್ನಿಯ ಇತಿಹಾಸದಲ್ಲಿ ತನ್ನ ಬದ್ಧ ಎದುರಾಳಿ ಪಾಕಿಸ್ತಾನ ಎದುರು ಅಜೇಯ ಗೆಲುವಿನ ಓಟವನ್ನು ಮುಂದುವರಿಸಿತು.

ಟಾಸ್ ಗೆದ್ದ ಭಾರತ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಪಾಕ್ ತಂಡವು 42.5 ಓವರ್‌ಗಳಲ್ಲಿ 191 ರನ್ ಗಳಿಸಿ ಎಲ್ಲ ವಿಕೆಟ್ ಕಳೆದುಕೊಂಡಿತು. ಗುರಿ ಬೆನ್ನತ್ತಿದ ಭಾರತ ತಂಡ 30.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.
.ಪಾಕ್ ವಿರುದ್ಧ ಗುಡುಗಿದ ಹಿಟ್ಮ್ಯಾನ್: ಏಕದಿನ ಮಾದರಿಯಲ್ಲಿ ಸಿಕ್ಸರ್ಗಳ ತ್ರಿಶತಕ.IND vs PAK: ಭಾರತಕ್ಕೆ ಹ್ಯಾಟ್ರಿಕ್ ಜಯ; ಹೈವೋಲ್ಟೇಜ್ ಪಂದ್ಯದ ಆಕರ್ಷಕ ಚಿತ್ರಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.