ಅಹಮದಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ಸರಣಿಯ ಬಳಿಕ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲು ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ನಿರ್ಧರಿಸಿದ್ದಾರೆ. ಮುಂದಿನ ವರ್ಷ ಭಾರತ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿ ವೇಳೆಗೆ ಸಂಪೂರ್ಣ ಫಿಟ್ ಆಗುವ ವಿಶ್ವಾಸದಲ್ಲಿ ಸ್ಟೋಕ್ಸ್ ಇದ್ದಾರೆ.

ಕಳೆದ 18 ತಿಂಗಳಿಂದ ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿರುವ ಅವರು, ಈ ಮೊದಲು ಆ್ಯಷಸ್ ಸರಣಿ ಬಳಿಕ ಜುಲೈನಲ್ಲಿ ಚಿಕಿತ್ಸೆಗೆ ಯೋಜಿಸಿದ್ದರು. ಬಳಿಕ, ಏಕದಿನ ಕ್ರಿಕೆಟ್‌ಗೆ ಘೋಷಿಸಿದ್ದ ನಿವೃತ್ತಿ ಹಿಂಪಡೆದು ವಿಶ್ವಕಪ್‌ನಲ್ಲಿ ಆಡಲು ನಿರ್ಧರಿಸಿದ್ದರು.

ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕರಾಗಿರುವ ಬೆನ್ ಸ್ಟೋಕ್ಸ್, ಪ್ರಮುಖ ಪಂದ್ಯಾವಳಿಗಳಲ್ಲಿ ಸ್ಪೆಷಲಿಸ್ಟ್ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದಾರೆ.

‘ಏಕದಿನ ವಿಶ್ವಕಪ್ ಸರಣಿ ಬಳಿಕ ನಾನು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲು ನಿರ್ಧರಿಸಿದ್ದೇನೆ. ಭಾರತದಲ್ಲಿ ನಡೆಯಲಿರುವ ಟೆಸ್ಟ್ ಸರಣಿ ಹೊತ್ತಿಗೆ ಚೇತರಿಸಿಕೊಳ್ಳಲಿದ್ದೇನೆ’ ಎಂದು ಅವರು ವರದಿಗಾರರಿಗೆ ತಿಳಿಸಿದರು.

‘ನಾನು ನಮ್ಮ ಫಿಸಿಯೊ ಮತ್ತು ವೈದ್ಯರನ್ನು ಭೇಟಿಯಾದಾಗಲೆಲ್ಲ ಅವರು ಈ ಬಗ್ಗೆ ಹೇಳುತ್ತಾರೆ. ಹಾಗಾಗಿ, ಶಸ್ತ್ರಚಿಕಿತ್ಸೆಗೆ ಒಳಗಾಗಲು ನಿರ್ಧರಿಸಿದ್ದೇನೆ’ ಎಂದಿದ್ದಾರೆ.

ಜನವರಿ 25ರಂದು ಮೊದಲ ಟೆಸ್ಟ್ ಪಂದ್ಯ ಆಡುವ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.