ದುಬೈ (ಪಿಟಿಐ): ಇಂಗ್ಲೆಂಡ್ ತಂಡದ ವೇಗಿ ಜೇಮ್ಸ್ ಆ್ಯಂಡರ್ಸನ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮಂಗಳವಾರ ಬಿಡುಗಡೆ ಮಾಡಿರುವ ಟೆಸ್ಟ್ ಬೌಲರ್ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಇದು ಆಂಗ್ಲರ ನಾಡಿನ ವೇಗಿಯ ವೃತ್ತಿಜೀವನದ ಶ್ರೇಷ್ಠ ಸಾಧನೆ ಎನಿಸಿದೆ. ಶ್ರೀಲಂಕಾ ವಿರುದ್ಧದ ಮೊದಲ ಎರಡು ಪಂದ್ಯಗಳಲ್ಲಿ ಆ್ಯಂಡರ್ಸನ್ ಅಮೋಘ ಆಟ ಆಡಿದ್ದರು. ಅವರ ಶಿಸ್ತಿನ ದಾಳಿಯ ಬಲದಿಂದ ಇಂಗ್ಲೆಂಡ್ ಎರಡೂ ಪಂದ್ಯಗಳಲ್ಲಿ ಗೆಲುವು ಗಳಿಸಿತ್ತು. ಆ್ಯಂಡರ್ಸನ್ ಅವರು ಒಟ್ಟು 884 ಪಾಯಿಂಟ್ಸ್ ಕಲೆಹಾಕಿ ಪಟ್ಟಿಯಲ್ಲಿ ಮೊದಲ ಬಾರಿಗೆ ಅಗ್ರಸ್ಥಾನ ಗಳಿಸಿದ್ದಾರೆ.

ಜೇಮ್ಸ್, ಟೆಸ್ಟ್ ಬೌಲರ್ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ ಇಂಗ್ಲೆಂಡ್ನ ನಾಲ್ಕನೇ ಬೌಲರ್ ಎನಿಸಿದ್ದಾರೆ. ಇಯಾನ್ ಬಾಥಮ್ (1980), ಸ್ಟೀವ್ ಹ್ಯಾಮಿಲ್ಟನ್ (2004) ಮತ್ತು ಸ್ಟುವರ್ಟ್ ಬ್ರಾಡ್ ಅವರು ಮೊದಲು ಈ ಸಾಧನೆ ಮಾಡಿದ್ದರು. ಆಫ್ ಸ್ಪಿನ್ನರ್ ಅಶ್ವಿನ್ ಅವರು ಪಟ್ಟಿಯಲ್ಲಿ ಎರಡನೇ ಸ್ಥಾನ ಕಾಯ್ದುಕೊಂಡಿದ್ದಾರೆ.

ಅಶ್ವಿನ್ ಖಾತೆಯಲ್ಲಿ 871 ಪಾಯಿಂಟ್ಸ್ ಇದೆ. ಇಂಗ್ಲೆಂಡ್ ತಂಡದ ಮತ್ತೊಬ್ಬ ವೇಗಿ ಸ್ಟುವರ್ಟ್ ಬ್ರಾಡ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಪಾಕಿಸ್ತಾನದ ಯಾಶಿರ್ ಶಾ, ದಕ್ಷಿಣ ಆಫ್ರಿಕಾದ ಡೇಲ್ ಸ್ಟೇಯ್ನ್ ಮತ್ತು ಭಾರತದ ರವೀಂದ್ರ ಜಡೇಜ ಅವರು ಕ್ರಮವಾಗಿ ನಾಲ್ಕರಿಂದ ಆರನೇ ಸ್ಥಾನ ಗಳಲ್ಲಿದ್ದಾರೆ.

35ನೇ ಸ್ಥಾನಕ್ಕೆ ಬಡ್ತಿ ಪಡೆದ ಅಲಿ: ಟೆಸ್ಟ್ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡದ ಮೊಯೀನ್ ಅಲಿ 35ನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ. ಇದು ಅಲಿ ಅವರ ವೃತ್ತಿ ಜೀವನದ ಶ್ರೇಷ್ಠ ರ್ಯಾಂಕಿಂಗ್ ಎನಿಸಿದೆ. ಇಂಗ್ಲೆಂಡ್ನ ಅಲೆಕ್ಸ್ ಹೇಲ್ಸ್ 47 ಸ್ಥಾನ ಮೇಲೇರಿದ್ದು 70ನೇ ಸ್ಥಾನ ಗಳಿಸಿದ್ದಾರೆ. ಶ್ರೀಲಂಕಾದ ದಿನೇಶ್್ ಚಾಂಡಿಮಲ್ 19ನೇ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.