ಹೈದರಾಬಾದ್: ವರವರ ರಾವ್ ಅವರ ಆರೋಗ್ಯ ಸ್ಥಿತಿ ಕುರಿತು ಪಾರದರ್ಶಕ ಮಾಹಿತಿ ನೀಡಬೇಕು ಎಂದು ಮುಂಬೈನ ನಾನಾವತಿ ಆಸ್ಪತ್ರೆಗೆ ನಿರ್ದೇಶಿಸುವಂತೆ ಕೋರಿ ಅವರ ಕುಟುಂಬದ ಸದಸ್ಯರು ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ (ಎನ್ಎಚ್ಆರ್ಸಿ) ಶುಕ್ರವಾರ ಅರ್ಜಿ ಸಲ್ಲಿಸಿದ್ದಾರೆ.

ವರವರ ರಾವ್ ಅವರ ಆರೋಗ್ಯ ಕುರಿತಂತೆಮುಂಬೈನ ನಾನಾವತಿ ಆಸ್ಪತ್ರೆಯು ಮಾಹಿತಿ ನೀಡಲು ನಿರಾಕರಿಸಿದೆ. ಈ ಕಾರಣದಿಂದ ಅರ್ಜಿ ಸಲ್ಲಿಸಲಾಗುತ್ತಿದೆ. ಜೈಲಿನಿಂದ ಅವರನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಿದಂದಿನಿಂದಲೂ ಮಾಹಿತಿ ನೀಡಿಲ್ಲ. ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದಷ್ಟೇ ತಿಳಿಸಲಾಗಿದೆ ಎಂದು ವಿವರಿಸಿದ್ದಾರೆ.

ಆರೋಗ್ಯ ಸ್ಥಿತಿ ಕುರಿತ ಮಾಹಿತಿ ನಿರಾಕರಿಸುವುದು ಎನ್ಎಚ್ಆರ್ಸಿಯ ಜುಲೈ 13ರ ಆದೇಶದ ಉಲ್ಲಂಘನೆ. ರಾವ್ ಅವರಿಗೆ ಅಗತ್ಯ ಚಿಕಿತ್ಸೆ ನೀಡಬೇಕು, ಸಂಬಂಧಿಸಿದ ಮಾಹಿತಿಗಳನ್ನು ಕುಟುಂಬ ಸದಸ್ಯರಿಗೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಧ್ಯ ಪ್ರವೇಶಿಸಬೇಕು ಎಂದು ಕುಟುಂಬ ಸದಸ್ಯರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.