ಬೆಂಗಳೂರು: ಉದ್ಯಮಿ ಲೋಕನಾಥ್ ಅವರ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಜೈಲು ಸೇರಿರುವ ಮೊಹಮದ್ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಗರದ 63ನೇ ಸೆಷನ್ಸ್ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.

ಯು.ಬಿಸಿಟಿಯ ಫರ್ಜಿ ಕೆಫೆಯಲ್ಲಿ ಫೆಬ್ರುವರಿ 17ರಂದು ನಡೆದಿದ್ದ ಘಟನೆ ನಂತರ ಪೊಲೀಸರಿಗೆ ಶರಣಾಗಿದ್ದ ನಲಪಾಡ್, 99 ದಿನಗಳಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಈಗ, ಆತನಿಗೆ ಮತ್ತಷ್ಟು ದಿನಗಳು ಜೈಲೇ ಗತಿ ಆಗಿದೆ.

ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರಿಂದ ಆರೋಪಿ ಪರ ವಕೀಲ ಉಸ್ಮಾನ್, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶ ಪರಮೇಶ್ವರ್ ಪ್ರಸನ್ನ, ‘ಆರೋಪಿಗಳ ವಿರುದ್ಧ ಕೊಲೆ ಯತ್ನ (ಐಪಿಸಿ 307) ಪ್ರಕರಣ ದಾಖಲಾಗಿದೆ. ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಈ ಹಂತದಲ್ಲಿ ಜಾಮೀನು ಮಂಜೂರು ಮಾಡಲು ಸಾಧ್ಯವಿಲ್ಲ’ ಎಂದು ಅರ್ಜಿ ವಜಾಗೊಳಿಸಿದರು.

ವಕೀಲ ಉಸ್ಮಾನ್, ‘ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಸದ್ಯದಲ್ಲೇ ಮೇಲ್ಮನವಿ ಸಲ್ಲಿಸಲಿದ್ದೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.