ಲಖನೌ: ಕೊರೊನಾವೈರಸ್ (ಕೊವಿಡ್–19) ಸೋಂಕು ತಗುಲಿರುವ ಬಾಲಿವುಡ್ ಗಾಯಕಿ ಕನಿಕಾ ಕಪೂರ್ ವಿರುದ್ಧ ನಿರ್ಲಕ್ಷ್ಯ ಮತ್ತು ಸರ್ಕಾರದ ಆದೇಶಕ್ಕೆ ಅಸಹಕಾರ ತೋರಿದ ಆರೋಪದಡಿ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಲಖನೌನ ಸರೋಜಿನಿ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸೂರ್‌ಜಿತ್ ಪಾಂಡೆ ತಿಳಿಸಿದ್ದಾರೆ.

‘ಭಾರತೀಯ ದಂಡ ಸಂಹಿತೆಯ ಸೆಕ್ಷನ್ 269, 270 (ಜೀವಕ್ಕೆ ಅಪಾಯಕಾರಿಯಾದ ಸೋಂಕು ಹರಡುವ ವಿಚಾರದಲ್ಲಿ ನಿರ್ಲಕ್ಷ್ಯ ತೋರುವುದಕ್ಕೆ ಸಂಬಂದಿಸಿದ್ದು), ಮತ್ತು ಸೆಕ್ಷನ್ 188 (ಸರ್ಕಾರಿ ಅಧಿಕಾರಿ ನೀಡಿದ ಆದೇಶಕ್ಕೆ ಅಸಹಕಾರ) ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ’ ಎಂದು ಪಾಂಡೆ ಹೇಳಿದ್ದಾರೆ.

ಇದನ್ನೂ ಓದಿ:ಬಾಲಿವುಡ್ ಗಾಯಕಿ ಕನಿಕಾ ಕಪೂರ್‌ಗೆ ಕೋವಿಡ್–19

ಲಖನೌನ ಮುಖ್ಯ ವೈದ್ಯಕೀಯ ಅಧಿಕಾರಿ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹಜರತ್‌ಗಂಜ್ ಮತ್ತು ಗೋಮತಿನಗರ್ ಪೊಲೀಸ್ ಠಾಣೆಗಳಲ್ಲಿಯೂ ಗಾಯಕಿ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆ ಇದೆ. ಈ ಠಾಣೆಗಳ ವ್ಯಾಪ್ತಿಯಲ್ಲಿ ಅವರು ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಇತ್ತೀಚೆಗಷ್ಟೇ ಇಂಗ್ಲೆಂಡ್‌ನಿಂದ ಮರಳಿದ್ದ ಕನಿಕಾ ಕಪೂರ್‌ಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಶುಕ್ರವಾರ ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ, ವಿದೇಶದಿಂದ ಬಂದ ಬಳಿಕ ಕನಿಕಾ ಅವರು ಅತಿಥಿಯಾಗಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಹಾಗೂ ಅವರ ಪುತ್ರ ದುಶ್ಯಂತ್ ಸಿಂಗ್ ಭಾಗಿಯಾಗಿರುವುದು ತಿಳಿದುಬಂದಿತ್ತು. ಕಾರ್ಯಕ್ರಮದ ನಂತರ ದುಶ್ಯಂತ್ ಸಂಸತ್ ಸದನದಲ್ಲಿಯೂ ಹಾಜರಿದ್ದರು.

ಇದನ್ನೂ ಓದಿ:ಕನಿಕಾ ಜತೆಗಿದ್ದ ವಸುಂಧರಾ ರಾಜೇ, ಪುತ್ರ ದುಶ್ಯಂತ್; ನಂತರ ಸಂಸತ್ತಿಗೂ ಹಾಜರಿ!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.