ಚಾಮರಾಜನಗರ: ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ ಗುರುವಾರ 3ನೇ ದಿನಕ್ಕೆ ಕಾಲಿಟ್ಟಿದೆ. ಎಂದಿನಂತೆ 500ಕ್ಕೂ ಹೆಚ್ಚಿನ ಪ್ರತಿಭಟನಾಕಾರರು ಪ್ರಧಾನ ಅಂಚೆ ಕಚೇರಿ ಮುಂಭಾಗ ಜಮಾವಣೆಗೊಂಡರು. ನಂತರ, ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆಕೊಟ್ಟು ಗ್ರಾಮೀಣ ಅಂಚೆ ಸೇವೆಯನ್ನು ಅಕ್ಷರಶಃ ಬಂದ್ ಮಾಡಿದ್ದರೂ ಕೇಂದ್ರ ಸರ್ಕಾರ ಮಾತುಕತೆಗೆ ಮುಂದಾಗಿಲ್ಲ. ಬೃಹತ್ ಪ್ರತಿಭಟನೆಯಿಂದ ಗ್ರಾಮೀಣ ಭಾಗದ ಜನರಿಗೆ ತೊಂದರೆಯಾಗಿದೆ ಎಂಬುದು ನಿಜ. ಆದರೆ, ನಮ್ಮ ನೋವನ್ನು ಪರಿಹರಿಸಬೇಕಾಗಿದೆ. ಸರ್ಕಾರ ಈಗಲಾದರೂ ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ ತಕ್ಷಣ ಕರ್ತವ್ಯಕ್ಕೆ ಹಾಜರಾಗುತ್ತೇವೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಏಳನೇ ವೇತನ ಆಯೋಗ ಜಾರಿಗೆ ಬರಲಿ ಎಂದು ಬರೆದ ಪೋಸ್ಟರ್‌ಗಳನ್ನು ಹಿಡಿದ ಮುಷ್ಕರನಿರತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.