ನವದೆಹಲಿ: ದೇಶದಾದ್ಯಂತ ದಿನದಿಂದ ದಿನಕ್ಕೆಕೊರೊನಾ ವೈರಸ್ ಹಾವಳಿ ಮಿತಿಮೀರುತ್ತಲೇ ಇದ್ದು, ದೇಶಾದ್ಯಂತ 170 ಜಿಲ್ಲೆಗಳನ್ನು ಕೊರೊನಾ ವೈರಸ್ ಹಾಟ್‌ಸ್ಪಾಟ್ ಎಂದುಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ಘೋಷಿಸಿದೆ. ಈ ಪೈಕಿ ಕರ್ನಾಟಕದ ಎಂಟು ಜಿಲ್ಲೆಗಳು ಕೂಡ ಹಾಟ್‌ಸ್ಪಾಟ್ ಜಿಲ್ಲೆಗಳಾಗಿ ಗುರುತಿಸಲ್ಪಟ್ಟಿವೆ.

170 ಜಿಲ್ಲೆಗಳನ್ನು ಕೊರೊನಾ ವೈರಸ್ ಹಾಟ್‌ಸ್ಪಾಟ್‌ಗಳಾಗಿ ಮತ್ತು 207 ಜಿಲ್ಲೆಗಳನ್ನು ಹಾಟ್‌ಸ್ಪಾಟ್‌ಗಳಲ್ಲ ಎಂದು ಗುರುತಿಸಿದ್ದು, ಉಳಿದವುಗಳನ್ನು ಹಸಿರು ವಲಯಗಳಾಗಿ ವರ್ಗೀಕರಿಸಲಾಗಿದೆ.

ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿರುವ ಅಥವಾ ಸಕಾರಾತ್ಮಕ ಪ್ರಕರಣಗಳ ಬೆಳವಣಿಗೆ ದರವು ಹೆಚ್ಚಿರುವ ಜಿಲ್ಲೆಗಳನ್ನು ಹಾಟ್‌ಸ್ಪಾಟ್ ಜಿಲ್ಲೆಗಳು ಎಂದು ಗುರುತಿಸಲಾಗಿದೆ.ಉಳಿದವುಗಳು ಅತ್ಯಂತ ಕಡಿಮೆ ಸಂಖ್ಯೆಯ ಪ್ರಕರಣಗಳು ವರದಿಯಾಗಿರುವ ಜಿಲ್ಲೆಗಳಾಗಿವೆ. ಇದುವರೆಗೂ ಒಂದೇ ಒಂದು ಪ್ರಕರಣಗಳು ವರದಿಯಾಗಿರದಜಿಲ್ಲೆಗಳನ್ನು ಹಸಿರು ವಲಯ ಎಂದು ಗುರುತಿಸಲಾಗಿದೆ.

ಕರ್ನಾಟಕದ ಎಂಟು ಜಿಲ್ಲೆಗಳು ಕೊರೊನಾವೈರಸ್ ಹಾಟ್‌ಸ್ಪಾಟ್

ಬೆಂಗಳೂರು ನಗರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಬೀದರ್, ಕಲಬುರ್ಗಿ, ಬಾಗಲಕೋಟೆ ಮತ್ತು ಧಾರವಾಡವನ್ನು ಕೊರೊನಾವೈರಸ್ ಹಾಟ್‌ಸ್ಪಾಟ್ ಎಂದು ಗುರುತಿಸಲಾಗಿದೆ.

ಸಂಪುಟ ಕಾರ್ಯದರ್ಶಿಗಳು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿ, ಡಿಜಿಪಿ, ಆರೋಗ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳು, ಎಸ್‌ಪಿಗಳು, ಪುರಸಭೆ ಆಯುಕ್ತರು ಮತ್ತು ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಸಭೆಯಲ್ಲಿ, ಹಾಟ್‌ಸ್ಪಾಟ್‌ಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಅವರು ಚರ್ಚಿಸಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್‌ವಾಲ್ ತಿಳಿಸಿದ್ದಾರೆ.

ಈ ಪ್ರಕಾರ, ವಿಶೇಷ ತಂಡವು ಹಾಟ್‌ಸ್ಪಾಟ್‌ಗಳಲ್ಲಿ ಕೋವಿಡ್-19 ಪ್ರಕರಣಗಳನ್ನು ಹುಡುಕುತ್ತದೆ. ಕೋವಿಡ್-19 ದೃಢಪಟ್ಟ ರೋಗಿ ಅಥವಾ ಪ್ರಯಾಣದ ಇತಿಹಾಸದೊಂದಿಗೆ ನೇರ ಅಥವಾ ಪರೋಕ್ಷ ಸಂಪರ್ಕವನ್ನು ಹೊಂದಿರದಿದ್ದರೂ ಕೂಡ ಕ್ಲಸ್ಟರ್‌ನೊಳಗಿನ ಎಲ್ಲಾ ರೋಗಲಕ್ಷಣದ ಜನರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಲಾಗುತ್ತದೆ. ಹಾಟ್ ಸ್ಪಾಟ್ ಜಿಲ್ಲೆಗಳಲ್ಲಿ ಪ್ರತಿ ಮನೆಯಲ್ಲೂ ತಪಾಸಣೆ ನಡೆಸಲಾಗುತ್ತದೆ. ಈಗ ಹಾಟ್‌ಸ್ಪಾಟ್‌ಗಳಲ್ಲದ ಪ್ರದೇಶಗಳು ಕೂಡ ಭವಿಷ್ಯದಲ್ಲಿ ಸಂಭಾವ್ಯ ಹಾಟ್‌ಸ್ಪಾಟ್‌ಗಳಾಗಿ ಪರಿಣಮಿಸಬಹುದು ಎಂದು ಅಗರ್‌ವಾಲ್ ತಿಳಿಸಿದ್ದಾರೆ.

ಈ ಮಧ್ಯೆ ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 1,076 ಹೊಸ ಪ್ರಕರಣಗಳೊಂದಿಗೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 11,439ಕ್ಕೆ ತಲುಪಿದ್ದು, ಮೃತರ ಸಂಖ್ಯೆ 377ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.