ನವದೆಹಲಿ:ಐಎನ್ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿಯ ನ್ಯಾಯಾಲಯ ನವೆಂಬರ್ 27ರವರೆಗೆ ವಿಸ್ತರಿಸಿದೆ.

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ಅಕ್ಟೋಬರ್ 22ರಂದು ಚಿದಂಬರಂ ಅವರಿಗೆ ಜಾಮೀನು ದೊರೆತಿದೆ. ಆದರೂಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಪ್ರಕರಣದಲ್ಲಿ ಅವರನ್ನು ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

ಇದನ್ನೂ ಓದಿ:ಚಿದಂಬರಂಗೆ ಆಸ್ಪತ್ರೆ ವಾಸ ಬೇಡ: ಸೊಳ್ಳೆ ಪರದೆ, ಮನೆ ಆಹಾರ ನೀಡಿ ಎಂದ ಹೈಕೋರ್ಟ್

ಚಿದಂಬರಂ ಅವರನ್ನು ಆಸ್ಪತ್ರೆಗೆ ದಾಖಲಿಸುವ ಅಗತ್ಯವಿಲ್ಲ.ಅವರಿರುವ ಸೆಲ್ನ ಸುತ್ತ ಸ್ವಚ್ಛ ಮತ್ತು ನಿರ್ಮಲ ಪರಿಸರ ಇರುವಂತೆ ನೋಡಿಕೊಳ್ಳಬೇಕು. ಜತೆಗೆ ಮನೆಯಲ್ಲಿ ತಯಾರಿಸಿದ ಆಹಾರ, ಮಿನರಲ್ ವಾಟರ್, ಸೊಳ್ಳೆ ಪರದೆ ನೀಡಬೇಕು ಎಂದು ದೆಹಲಿ ಹೈಕೋರ್ಟ್ ನವೆಂಬರ್ 1ರಂದು ಜೈಲು ಅಧಿಕಾರಿಗಳಿಗೆ ಸೂಚಿಸಿತ್ತು.

ಇದಕ್ಕೂ ಮುನ್ನ, ಇ.ಡಿ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ನೀಡುವಂತೆ ದೆಹಲಿ ಹೈಕೋರ್ಟ್ಗೆಚಿದಂಬರಂ ಮನವಿ ಮಾಡಿದ್ದರು. ಆದರೆ ಅದು ತಿರಸ್ಕೃತಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.