ಬೆಂಗಳೂರು: ಮುಖ್ಯಮಂತ್ರಿಗಳ ಒಂದು ಲಕ್ಷ ಬಹು ಮಹಡಿ ವಸತಿ ಯೋಜನೆಯಡಿ ಮನೆ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಫೆ. 15ರವರೆಗೆ ವಿಸ್ತರಿಸಲಾಗಿದೆ.

ಮೊದಲಿಗೆ ಜನವರಿ 5ಕ್ಕೆ ಅಂತಿಮ ದಿನಾಂಕ ನಿಗದಿ ಮಾಡಲಾಗಿತ್ತು. ವಿಸ್ತರಣೆ ಕೋರಿ ಸಾರ್ವಜನಿಕರಿಂದ ಬಂದ ಮನವಿಗಳನ್ನು ಆಧರಿಸಿ ಇದೇ 31ರವರೆಗೆ ಅವಕಾಶ ನೀಡಲಾಗಿತ್ತು. ಆದರೂ, ಈವರೆಗೆ 33,500 ಅರ್ಜಿಗಳು ಸಲ್ಲಿಕೆಯಾಗಿವೆ.

ಆದಾಯ ಹಾಗೂ ವಾಸಸ್ಥಳ ಪ್ರಮಾಣ ಪತ್ರ ಪಡೆಯಲು ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ವಿಳಂಬವಾಗುತ್ತಿರುವ ಕಾರಣ ಅವಧಿ ವಿಸ್ತರಿಸುವಂತೆ ಮತ್ತೆ ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಮೂರನೇ ಬಾರಿಗೆ ಅವಧಿ ವಿಸ್ತರಿಸಿದ್ದು, ಮತ್ತೆ ವಿಸ್ತರಣೆ ಮಾಡುವುದಿಲ್ಲ ಎಂದು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.