ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡಣವೀಸ್ ನೇತೃತ್ವದ ಬಿಜೆಪಿ ಸರ್ಕಾರ ನಾಳೆ (ನ.27) ಸಂಜೆ 5 ಗಂಟೆಯ ಒಳಗೆ ವಿಶ್ವಾಸಮತ ಯಾಚಿಸಬೇಕು ಎನ್ನುವ ಸುಪ್ರೀಂ ಕೋರ್ಟ್ ತೀರ್ಪನ್ನುಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಸ್ವಾಗತಿಸಿದೆ.

‘ಸತ್ಯಮೇವ ಜಯತೇ. ಬಿಜೆಪಿಯ ಆಟ ಮುಗಿಯಿತು’ (Satyamev Jayate BJP ka khel khatm) ಎಂದು ಕೋರ್ಟ್ ತೀರ್ಪು ಪ್ರಕಟವಾದ ಕೆಲವೇ ನಿಮಿಷಗಳಲ್ಲಿ ಎನ್‌ಸಿಪಿ ಮುಖ್ಯ ವಕ್ತಾರ ನವಾಬ್ ಮಲಿಕ್ ಪ್ರತಿಕ್ರಿಯಿಸಿದರು.

‘ಪ್ರಜಾಸತ್ತಾತ್ಮಕ ಮೌಲ್ಯ ಮತ್ತು ಸಂವಿಧಾನದ ನೀತಿಗಳನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌ಗೆ ನಾನು ಅಭಾರಿಯಾಗಿದ್ದೇನೆ. ಸಂವಿಧಾನದ ದಿನವೇ ಮಹಾರಾಷ್ಟ್ರದ ತೀರ್ಪು ಬಂದಿದ್ದು ಹೃದಯಸ್ಪರ್ಶಿ ವಿದ್ಯಮಾನ. ಭಾರತರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಸಂದ ಗೌರವ’ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರ ವಿದ್ಯಮಾನಗಳ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟಕ್ಕೆ ತೃಪ್ತಿ ನೀಡಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ಪ್ರತಿಕ್ರಿಯಿಸಿದ್ದಾರೆ.

‘ಸಂವಿಧಾನದ ದಿನ ಸಂವಿಧಾನಕ್ಕೆ ಗೌರವ ಸಿಕ್ಕಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಮಗೆ ಬಹುಮತವಿದೆ. ಬಿಜೆಪಿಯ ಬಣ್ಣ ನಾಳೆ ಬಯಲಾಗುತ್ತೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು...

ಮಹಾರಾಷ್ಟ್ರ ರಾಜಕೀಯ | ಈವರೆಗಿನ ಸಮಗ್ರ ಬೆಳವಣಿಗೆಗಳು

ಮಹಾ ರಾಜಕೀಯ| ನಾಳೆ ಸಂಜೆ 5ರ ಒಳಗೆ ಬಹುಮತ ಸಾಬೀತು ಮಾಡಬೇಕು ಫಡಣವೀಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.