ಲಖನೌ: ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷವು(ಬಿಎಸ್‌ಪಿ) ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲಎಂದು ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

ಯಾವುದೇ ರಾಜ್ಯಗಳಲ್ಲಿ ಕಾಂಗ್ರೆಸ್ ಜತೆಗೆ ಮೈತ್ರಿ ಸಾಧ್ಯವಿಲ್ಲ ಎಂದಿರುವ ಮಾಯಾವತಿ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಏಕಾಂಗಿ ಹೋರಾಟ ನಡೆಸುವ ಪಣ ತೊಟ್ಟಿದ್ದಾರೆ.

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಮಾಯಾವತಿ, ಬಿಜೆಪಿಯನ್ನು ಮಟ್ಟಹಾಕಲು ಈಗಾಗಲೇ ಹಲವು ಕಸರತ್ತುಗಳನ್ನು ನಡೆಸುತ್ತಿರುವ ಕಾಂಗ್ರೆಸ್, ಬಿಎಸ್‌ಪಿಯನ್ನು ಸಹ ನಾಶಪಡಿಸಲು ಹೊಂಚು ಹಾಕಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್‌ನದ್ದು ಜಾತಿವಾದಿ ಮನಸ್ಥಿತಿ. ಕೆಲವು ಪಕ್ಷದ ಮುಖಂಡರಿಗೂ ಅವರೊಟ್ಟಿಗೆ ಮೈತ್ರಿ ಮಾಡಿಕೊಳ್ಳಲು ಆಸಕ್ತಿಯಿಲ್ಲ. ಮಧ್ಯಪ್ರದೇಶದಲ್ಲಿ 230 ಸ್ಥಾನಗಳಿದ್ದು, ಇದರಲ್ಲಿ ಕೇವಲ 15 ರಿಂದ 20 ಸ್ಥಾನ, ಇನ್ನು ಚತ್ತೀಸಗಡದಲ್ಲಿ 90 ಸ್ಥಾನಗಳ ಪೈಕಿ 5 ಸ್ಥಾನಗಳನ್ನಷ್ಟೇ ಬಿಎಸ್‌ಪಿಗೆ ನೀಡುವ ಇಂಗಿತವನ್ನು ಕಾಂಗ್ರೆಸ್ ಹೊಂದಿದೆ ಎಂದು ಅಸಮಾಧಾನವ್ಯಕ್ತಪಡಿಸಿದ್ದಾರೆ.

ಅಲ್ಲದೆ ದುರಹಂಕಾರದ ಕಾಂಗ್ರೆಸ್, ಬಿಜೆಪಿಯನ್ನು ಸೋಲಿಸುವ ಭ್ರಮೆಯಲ್ಲಿದೆ. ಆದರೆ, ಇದು ಈ ಹಿಂದೆ ಮಾಡಿರುವ ತಪ್ಪುಗಳನ್ನು, ಭ್ರಷ್ಟಾಚಾರವನ್ನು ಜನರುಮರೆತಿಲ್ಲ ಎಂಬುದು ವಾಸ್ತವದ ಸಂಗತಿ. ಅಲ್ಲದೆ ತಮ್ಮ ತಪ್ಪುಗಳನ್ನು ತಿದ್ದಿಕೊಂಡು ನಡೆಯಲು ಅದು ತಯಾರಿಲ್ಲ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.