ನವದೆಹಲಿ:ಈಚೆಗೆ ಸೋರಿಕೆಯಾದ ಗೋಪ್ಯ ದಾಖಲೆಗಳನ್ನುರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ ತೀರ್ಪಿನ ಮರುಪರಿಶೀಲನೆ ವೇಳೆ ಪರಿಗಣಿಸಬೇಕೇ ಎಂಬ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ.

ದಾಖಲೆಗಳನ್ನು ಪರಿಗಣಿಸುವುದಕ್ಕೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿ ಮೊದಲು ನಿರ್ಧಾರ ಕೈಗೊಳ್ಳಲಾಗುವುದು. ನಂತರ ಪ್ರಕರಣದ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಹೇಳಿದೆ.

ತೀರ್ಪು ಮರುಪರಿಶೀಲಿಸುವಂತೆ ಮಾಜಿ ಕೇಂದ್ರ ಸಚಿವರಾದ ಯಶವಂತ್ ಸಿನ್ಹಾ, ಅರುಣ್ ಶೌರಿ ಹಾಗೂ ವಕೀಲ ಪ್ರಶಾಂತ್ ಭೂಷಣ್ ಅವರು, ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:‘ರಫೇಲ್ ಗೋಪ್ಯ ದಾಖಲೆ ಬಹಿರಂಗ ದೇಶದ ಭದ್ರತೆಗೆ ಅಪಾಯ’

‘ಇವರು ಸಲ್ಲಿಸಿರುವ ದಾಖಲೆಗಳಲ್ಲಿ,ರಫೇಲ್ ಯುದ್ಧವಿಮಾನಗಳ ಯುದ್ಧ ಸಾಮರ್ಥ್ಯ ಕುರಿತ ವಿವರಗಳಿವೆ. ಸಾರ್ವಜನಿಕವಾಗಿ ಲಭ್ಯವಾಗುತ್ತಿರುವ ಈ ದಾಖಲೆಗಳು ಶತ್ರುಗಳಿಗೆ ದೊರಕುವ ಅಪಾಯ ಇದೆ’ ಎಂದುಸುಪ್ರೀಂ ಕೋರ್ಟ್ಗೆ ಸಲ್ಲಿಸಲಾಗಿರುವ ಅಫಿಡವಿಟ್ನಲ್ಲಿ ಕೇಂದ್ರ ಸರ್ಕಾರ ಉಲ್ಲೇಖಿಸಿತ್ತು.

ಇದನ್ನೂ ಓದಿ:ರಫೇಲ್ ದಾಖಲೆ ಕಳವು: ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ ಗೋಪ್ಯ ದಾಖಲೆಗಳು ಕಳವಾಗಿವೆ. ಇವುಗಳನ್ನು ಮರುಪರಿಶೀಲನಾ ಅರ್ಜಿ ಜತೆ ಪರಿಗಣಿಸಬಾರದು ಎಂದು ಈಚೆಗೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು. ಬಳಿಕ, ದಾಖಲೆಗಳು ಕಳವಾಗಿಲ್ಲ. ನಕಲು ಮಾಡಲಾಗಿದೆ ಎಂದು ಹೇಳಿತ್ತು.

ಇನ್ನಷ್ಟು...

*ರಫೇಲ್ ರಹಸ್ಯ ದಾಖಲೆ ಕಳವು: ಸುಪ್ರೀಂ ಕೋರ್ಟ್ಗೆ ಕೇಂದ್ರ ಮಾಹಿತಿ

*ರಫೇಲ್ ದಾಖಲೆ ಕಳವು: ಮುಖ್ಯ ನ್ಯಾಯಮೂರ್ತಿ ಹೇಳಿದ್ದೇನು?

*ರಫೇಲ್ ಒಪ್ಪಂದ: ಕೇಂದ್ರಕ್ಕೆ ನಿರಾಳತೆ ಒದಗಿಸಿದ ‘ಸುಪ್ರೀಂ’ ತೀರ್ಪು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.