ಮುಂಬೈ: ಬಿಜೆಪಿ ಜೊತೆ ಈ ಹಿಂದೆ ಮಾಡಿಕೊಂಡ ಒಪ್ಪಂದಕ್ಕೆ ನಾವು ಬದ್ಧರಾಗಿದ್ದು ಮುಖ್ಯಮಂತ್ರಿ ಹುದ್ದೆ ಕುರಿತಂತೆ ಬಿಜೆಪಿ ನಾಯಕರ ಜೊತೆ ಚರ್ಚೆ ಮಾಡುತ್ತೇವೆ ಎಂದು ಶಿವಸೇನೆ ಮುಖ್ಯಸ್ಥ ಉದ್ದವ್ ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಚುನಾವಣೆ ಪೂರ್ವದಲ್ಲಿ ಮಾಡಿಕೊಂಡಿದ್ದ ಒಪ್ಪಂದಕ್ಕೆ ನಾವು ಬದ್ದರಾಗಿದ್ದೇವೆ ಎಂದು ಹೇಳಿದ್ದಾರೆ. ಜನರ ತೀರ್ಪನ್ನು ಸ್ವಾಗತಿಸಿರುವುದಾಗಿ ಉದ್ದವ್ ಠಾಕ್ರೆ ಹೇಳಿದರು.

ಮುಖ್ಯಮಂತ್ರಿ ಸ್ಥಾನ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು 50:50 ಹೊಂದಾಣಿಕೆಯಂತೆ ಸಿಎಂ ಸ್ಥಾನದ ಕುರಿತಾಗಿಯೂ ಬಿಜೆಪಿ ಜೊತೆ ಚರ್ಚೆ ಮಾಡಲಾಗುವುದು ಎಂದು ಉದ್ದವ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.