ನವದೆಹಲಿ:ಪೌರತ್ವ (ತಿದ್ದುಪಡಿ) ಕಾಯ್ದೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.ಕಾಯ್ದೆಯ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಕೆಯಾಗಿರುವ 60 ಅರ್ಜಿಗಳನ್ನು ವಿಚಾರಣೆಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ, ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಕಾಯ್ದೆಯನ್ನು ತಡೆಹಿಡಿಯಬೇಕೇ ಎಂಬ ಬಗ್ಗೆ ನಾವು ಪರಿಶೀಲಿಸಬೇಕಾಗಿದೆ ಎಂದುನ್ಯಾಯಮೂರ್ತಿ ಬಿ.ಆರ್.ಗವಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಪೀಠ ಅರ್ಜಿದಾರರಿಗೆ ಹೇಳಿದೆ. ಜತೆಗೆ, ಮುಂದಿನ ವಿಚಾರಣೆಯನ್ನು ಜನವರಿ 22ಕ್ಕೆ ನಿಗದಿಪಡಿಸಿದೆ.

ಕಾಯ್ದೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಮಂಗಳವಾರ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಅಮಿತ್ ಶಾ,ಎಷ್ಟೇ ಪ್ರತಿಭಟನೆ ನಡೆಸಿದರೂ ಈ ಕಾಯ್ದೆ ಜಾರಿಯನ್ನು ತಡೆಯಲು ಸಾಧ್ಯವಿಲ್ಲ.ಕಾಯ್ದೆ ಜಾರಿ ಖಡಾಖಂಡಿತ ಎಂದು ಹೇಳಿದ್ದರು.

ಇನ್ನಷ್ಟು...

ಪೌರತ್ವ ತಿದ್ದುಪಡಿ ಕಾಯ್ದೆ| ಭಾರತದ ಮುಸ್ಲಿಮರಿಗೆ ತೊಂದರೆಯಿಲ್ಲ: ಅಹಮದ್ ಬುಖಾರಿ

‘ಪೌರತ್ವ’ ಜಾರಿ ಖಡಾಖಂಡಿತ: ಗೃಹ ಸಚಿವ ಅಮಿತ್ ಶಾ ದೃಢ ನುಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.