ಹೈದರಾಬಾದ್: ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ದೂರು ದಾಖಲಿಸಲು ತಡ ಮಾಡಿದ ಆರೋಪದ ಮೇಲೆ ಮೂವರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಈ ಘಟನೆಯ ಕುರಿತು ರಾಷ್ಟ್ರದಾದ್ಯಂತ ಕಳವಳ, ಆತಂಕ ವ್ಯಾಪಕವಾಗಿ ವ್ಯಕ್ತವಾಗಿದ್ದಲ್ಲದೆ, ಶನಿವಾರ ಹೈದರಾಬಾದ್‌ನಲ್ಲಿ ಘಟನೆಯನ್ನು ಖಂಡಿಸಿ ಭಾರಿ ಪ್ರತಿಭಟನೆ ನಡೆಯಿತು. ಎಲ್ಲಾ ಬೆಳವಣಿಗೆಗಳ ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಸಂಬಂಧಿಸಿದ ಠಾಣೆಯ ಮೂವರು ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.

ಬುಧವಾರ ರಾತ್ರಿ ಘಟನೆ ನಡೆದಿದ್ದು, ಗುರುವಾರ ಬೆಳಗ್ಗೆ ಸಂತ್ರಸ್ತೆಯ ಕುಟುಂಬದವರು ದೂರು ನೀಡಿದರೂ ದಾಖಲಿಸದೆ ತಡ ಮಾಡಿದರು ಎಂದು ಆರೋಪಿಸಲಾಗಿದೆ. ಅಲ್ಲದೆ, ಠಾಣೆಯ ವ್ಯಾಪ್ತಿಯಲ್ಲಿ ಸರಿಯಾದ ಗಸ್ತು ವ್ಯವಸ್ಥೆ ಇಲ್ಲದೆ, ಲಾರಿ ಚಾಲಕರು ಎಲ್ಲೆಂದರಲ್ಲಿ ಲಾರಿಗಳನ್ನು ನಿಲ್ಲಿಸಿ ಅನೈತಿಕ ಚಟುವಟಿಕೆಗಳಲ್ಲಿತೊಡಗುತ್ತಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ. ಈ ಸಂಬಂಧ ಶನಿವಾರ ರಾತ್ರಿಯೇ ಮೂವರು ಸಿಬ್ಬಂದಿಯನ್ನು ಅಮಾನತುಪಡಿಸಲಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.