ಕೋಲ್ಕತ್ತ: ನಗರ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ಪ್ರಶ್ನಿಸಲು ಯತ್ನಿಸಿದ್ದನ್ನು ಖಂಡಿಸಿ ಟಿಎಂಸಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿ ದಹನ ಮಾಡಿ ಪ್ರತಿಭಟಿಸಿದ್ದಾರೆ.

ಸಿಬಿಐ ನಡೆ ಖಂಡಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾನುವಾರ ತಡರಾತ್ರಿ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದರು.

ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಕೇಂದ್ರ ಯತ್ನಿಸುತ್ತಿದೆ ಎಂದು ಆರೋಪಿಸಿದ ಮಮತಾ, ‘ನಾನು ಸಾಯಲು ಸಿದ್ಧಳಿದ್ದೇನೆ. ಆದರೆ ಮೋದಿ ಸರ್ಕಾರದ ಎದುರು ತಲೆತಗ್ಗಿಸಲು ಸಿದ್ಧವಿಲ್ಲ. ತುರ್ತು ಪರಿಸ್ಥಿತಿ ಹೇರಲು ಅವಕಾಶ ನೀಡುವುದಿಲ್ಲ’ ಎಂದಿದ್ದಾರೆ ಮಮತಾ. ಸಿಬಿಐ ವಿರುದ್ಧ ಪಶ್ಚಿಮ ಬಂಗಾಳದಾದ್ಯಂತ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆನಡೆಸುತ್ತಿದ್ದಾರೆ.

ಏನಿದು ಪ್ರಕರಣ?
ಚಿಟ್ ಫಂಡ್ ಹಗರಣದಲ್ಲಿ ಕೋಲ್ಕತ್ತ ನಗರ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ವಿಚಾರಣೆಗಾಗಿಅವರ ನಿವಾಸಕ್ಕೆ ತೆರಳಿದ್ದ ಸಿಬಿಐ ಅಧಿಕಾರಿಗಳನ್ನೇ ಪೊಲೀಸರು ವಶಕ್ಕೆ ಪಡೆದ ನಾಟಕೀಯ ಮತ್ತು ಅಪರೂಪದ ಘಟನೆಭಾನುವಾರ ನಡೆದಿದೆ. ವಶಕ್ಕೆ ಪಡೆದ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ.

ರೋಸ್ ವ್ಯಾಲಿ, ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದ ಕಡತ ಮತ್ತು ದಾಖಲೆ ಕಣ್ಮರೆಯಾದ ಬಗ್ಗೆ ಪ್ರಶ್ನಿಸಲು ಸಿಬಿಐ ಅಧಿಕಾರಿಗಳ ತಂಡ ಲಂಡನ್ ಸ್ಟ್ರೀಟ್‌ನಲ್ಲಿರುವ ಪೊಲೀಸ್ ಕಮಿಷನರ್ ನಿವಾಸಕ್ಕೆ ತೆರಳಿತ್ತು. ನಿವಾಸದಮುಂದೆ ಸಿಬಿಐ ಅಧಿಕಾರಿಗಳು ಮತ್ತು ಪೊಲೀಸರ ನಡುವೆ ವಾಗ್ವಾದಗಳು ನಡೆದಿತ್ತು.

ಪೊಲೀಸರ ಕ್ರಮ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಸಿಬಿಐ ಮೂಲಗಳು ಹೇಳಿವೆ.ನ್ಯಾಯಾಲಯ ಆದೇಶದ ಮೇರೆಗೆ ಪ್ರಕರಣದ ತನಿಖೆ ನಡೆಯುತ್ತಿದೆ.ರಾಜೀವ್ ಕುಮಾರ್ ವಿರುದ್ದ ತಮ್ಮಲ್ಲಿ ಸಾಕ್ಷ್ಯಗಳಿವೆ ಎಂದು ಸಿಬಿಐ ಹಂಗಾಮಿ ನಿರ್ದೇಶಕ ಎಂ. ನಾಗೇಶ್ವರ ರಾವ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.