ನವದೆಹಲಿ: ನ್ಯಾಷ ನಲ್ ಕಾನ್ಫರೆನ್ಸ್‌ನ ವರಿಷ್ಠ ಫಾರೂಕ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿ ಇರಿಸಿರುವುದನ್ನು ಪ್ರಶ್ನಿಸಿ ಎಂಡಿಎಂಕೆ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ವೈಕೊ ಸುಪ್ರೀಂಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಅವರನ್ನು ಕೋರ್ಟ್‌ನಲ್ಲಿ ಹಾಜರುಪಡಿಸುವಂತೆ ಕೇಂದ್ರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಜಮ್ಮು–ಕಾಶ್ಮೀರಕ್ಕೆ ವಿಶೇಷಾ ಧಿಕಾರ ನೀಡಿದ್ದ 370ನೇ ವಿಧಿ ಯನ್ನು ಕೇಂದ್ರ ಆ. 5ರಂದು ರದ್ದು ಮಾಡಿತು. ಅಂದಿನಿಂದಲೇ ಅಬ್ದುಲ್ಲಾ ಅವರನ್ನು ಗೃಹಬಂಧನ ದಲ್ಲಿ ಇರಿಸಲಾಗಿದೆ. ಆ ರಾಜ್ಯದ ಇತರ ರಾಜಕೀಯ ನಾಯಕರಿಗೂ ಮುಕ್ತವಾಗಿ ಓಡಾಡಲು ಅವಕಾಶ ನೀಡಿಲ್ಲ. ‘ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಸಿ.ಎನ್.ಅಣ್ಣಾದೊರೈ ಅವರ ಜನ್ಮ ದಿನದ ಅಂಗವಾಗಿ ಸೆ. 15ರಂದು ಆಯೋಜಿಸಿರುವ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾ ನಿಸಿದ್ದೇನೆ. ಆದರೆ, ಆ. 5ರ ನಂತರ ಅವರನ್ನು ಸಂಪರ್ಕಿಸುವ ಪ್ರಯತ್ನಗಳು ಫಲ ನೀಡಿಲ್ಲ’ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.