ಕೊಳ್ಳೇಗಾಲ: ‘ಮನುಷ್ಯನ ವ್ಯಕ್ತಿತ್ವ ವಿಕಸನವಾಗಬೇಕಾದರೆ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ, ಸಾಹಿತ್ಯ, ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಚಲನಚಿತ್ರ ನಟ ಪೂರ್ಣಚಂದ್ರ ಹೇಳಿದರು. ನಗರದ ಜೆಎಸ್ಎಸ್ ನರ್ಸಿಂಗ್ ಕಾಲೇಜಿನಲ್ಲಿ ಶುಕ್ರವಾರ ನಡೆದ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರಂಭ ‘ಕಲರವ’ ಉದ್ಘಾಟಿಸಿ ಮಾತನಾಡಿರು.

ಜೀವನದಲ್ಲಿ ಸಾಧನೆ ಮಾಡಬೇಕಾ ದರೆ ಮೊದಲು ನಾವು ಶಾರೀರಿಕವಾಗಿ, ದೈಹಿಕವಾಗಿ, ಮಾನಸಿಕವಾಗಿ, ಬೌದ್ಧಿಕವಾಗಿ ಪ್ರಬಲವಾಗಿರಬೇಕು, ಅದಕ್ಕಾಗಿ ಸಾಂಸ್ಕೃತಿಕ ಕ್ಷೇತ್ರಕ್ಕೆ ಹೆಚ್ಚು ಒಲವನ್ನು ನೀಡಬೇಕು ಎಂದರು.

ಯುವ ಸಮೂಹವೇ ದೇಶದ ಬಲ ಆದ್ದರಿಂದ ನೀವು ಸಮಾಜಕ್ಕೆ, ದೇಶಕ್ಕೆ ಉತ್ತಮ ಕೊಡುಗೆ ನೀಡಲು ಸಿದ್ಧತೆ ನಡೆಸಿ ಹಾಗೂ ಜೆಎಸ್ಎಸ್ ಶಿಕ್ಷಣ ಸಂಸ್ಥೆ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಅದರ ಜೊತೆಗೆ ಇತರೆ ಚಟುವಟಿಕೆಗೂ ಹೆಚ್ಚು ಮನ್ನಣೆ ನೀಡಿ ವಿದ್ಯಾರ್ಥಿಗಳಲ್ಲಿ ಇರುವ ಪ್ರತಿಭೆಯನ್ನು ಗುರುತಿಸಿ ಬೆಳೆಸಲು ಸಹಕಾರ ನೀಡುತ್ತಾ ಬಂದಿದೆ ಎಂದರು.

ರೋಟರಿ ವಿಡ್ ಟೌನ್ ಅಧ್ಯಕ್ಷ ಪ್ರದೀಪ್ ಫೆರ್ನಾಂಡಿಸ್, ಜೆಎಸ್ಎಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ವಿಷಕಂಠಮೂರ್ತಿ, ಉಪಪ್ರಾಂಶುಪಾಲರಾದ ರಂಗನಾಯಕಿ, ಮುಖೇಶ್, ಮಹೇಶ್, ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.