ಬೆಂಗಳೂರು:ಕೊರೊನಾ ವೈರಸ್ ಹರಡುವುದನ್ನುತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಶನಿವಾರದಿಂದ (ಮಾ.14) ರಾಜ್ಯದಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಕರ್ನಾಟಕ ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಶುಕ್ರವಾರ ಹೊರಡಿಸಿದ ಸುತ್ತೋಲೆ ಪ್ರಕಾರ 1 ರಿಂದ 6ನೇ ತರಗತಿಯ ಎಲ್ಲ ಶಾಲೆಗಳಿಗೆ 2020 ಮಾರ್ಚ್ 14 ರಿಂದ ಜಾರಿಗೆ ಬರುವಂತೆ ತರಗತಿಗಳನ್ನು ಸ್ಥಗಿತಗೊಳಿಸಲಾಗುವುದು. ಒಂದು ವೇಳೆ ಪರೀಕ್ಷೆಗಳು ನಡೆಯುತ್ತಿದ್ದರೆ ಪರೀಕ್ಷೆಗಳನ್ನು ರದ್ದುಗೊಳಿಸಿ ಬೇಸಿಗೆ ರಜೆ ಘೋಷಿಸಲಾಗುವುದು.

ಇದನ್ನೂ ಓದಿ:ಕೋವಿಡ್-19 ಮುಂಜಾಗ್ರತೆ | ರಾಜ್ಯದಲ್ಲಿ ಒಂದು ವಾರ ಬಂದ್, ಪರೀಕ್ಷೆ ಅಬಾಧಿತ: ಸಿಎಂ

7ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೂ ಮಾರ್ಚ್ 14ರಿಂದ ಜಾರಿಗೆ ಬರುವಂತೆ ತರಗತಿಗಳನ್ನು ಪರೀಕ್ಷಾ ಪೂರ್ವ ಸಿದ್ಧತಾ ರಜೆಯ ಮಾದರಿಯಲ್ಲಿ ಸ್ಥಗಿತಗೊಳಿಸಿ ಪರೀಕ್ಷಾ ದಿನಗಳಂದು ಮಾತ್ರ ಹಾಜರಾಗಲು ಸೂಚಿಸಿದೆ. 7ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ದಿನಾಂಕ 23-03-2020ರೊಳಗೆ ಪರೀಕ್ಷೆಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ ಬೇಸಿಗೆ ರಜೆ ಘೋಷಿಸುವಂತೆ ಆದೇಶ ಹೊರಡಿಸಲಾಗಿದೆ.

10ನೇ ತರಗತಿಯ ವಿದ್ಯಾರ್ಥಿಗಳಿಗೆಈಗಾಗಲೇ ನಿಗದಿಯಾಗಿರುವ ವೇಳಾಪಟ್ಟಿಯಂತೆ ಪರೀಕ್ಷೆ ನಡೆಯಲಿದೆ.
ವಿದ್ಯಾರ್ಥಿಗಳು ಸುರಕ್ಷತಾ ಕ್ರಮವಾಗಿ ಮಾಸ್ಕ್ ಧರಿಸಿ ಪರೀಕ್ಷೆಯನ್ನು ಬರೆಯಲು ಇಚ್ಛಿಸಿದರೆ ಅವರಿಗೆ ಅನುಮತಿ ನೀಡಬೇಕು. ಪರೀಕ್ಷೆಗಳ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಶಾಲಾ ಮುಖ್ಯಸ್ಥರಿಗೆ ಹೇಳಲಾಗಿದೆ.

ಈ ಆದೇಶವು ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ , ಐಜಿಸಿಎಸ್‌ಇ, ಐಬಿ ಮುಂತಾದ ಪಠ್ಯಕ್ರಮದ ಎಲ್ಲ ಶಾಲೆಗಳಿಗೂ ಅನ್ವಯವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.