ಬೆಂಗಳೂರು: ಕೇಂದ್ರ ಸಚಿವ ಅನಂತ್ಕುಮಾರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚಾರಣೆ ಮಾಡಲಾಗುವುದು. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ರಾಜ್ಯದ ಎಲ್ಲ ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಸಿ.ಜಾಫರ್ ತಿಳಿಸಿದ್ದಾರೆ.

ರಾಜ್ಯದಾದ್ಯಂತ ಎಲ್ಲಬ್ಯಾಂಕ್ಗಳು,ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟವು ಸಹ ಶಾಲೆಗಳಿಗೆ ರಜೆ ಘೋಷಿಸಿವೆ.ಬೆಂಗಳೂರು ವಿವಿ,ಮೈಸೂರು ವಿವಿ, ಕಲಬುರ್ಗಿ ವಿವಿ,ತುಮಕೂರು ವಿವಿ,ಧಾರವಾಡದ ಕರ್ನಾಟಕ ವಿವಿ ಮತ್ತು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿಗಳುಪರೀಕ್ಷೆಗಳನ್ನುಮುಂದೂಡಿದೆ.

ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮೈಸೂರಿನಿಂದ ಹೊರಟು ನೇರವಾಗಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ಆಗಮಿಸಿ ಕೇಂದ್ರ ಸಚಿವ ಅನಂತಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲಿದ್ದಾರೆ.

ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಎನ್. ಅನಂತ್ಕುಮಾರ್ (59) ಸೋಮವಾರ ನಸುಕಿನ 3 ಗಂಟೆಗೆ ನಿಧನರಾದರು. ಚಾಮರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ಕ್ಯಾನ್ಸರ್ಗಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ನಾರಾಯಣಶಾಸ್ತ್ರಿ ಮತ್ತು ಗಿರಿಜಾ ಎನ್.ಶಾಸ್ತ್ರಿ ಅವರ ಮಗನಾಗಿ ಜುಲೈ 22, 1959ರಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದರು. ಪತ್ನಿ ತೇಜಸ್ವಿನಿ ಮತ್ತು ಐಶ್ವರ್ಯ ಮತ್ತು ವಿಜೇತಾ ಹೆಸರಿನ ಪುತ್ರಿಯರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.