ಬೆಂಗಳೂರು: ಹನುಮಂತನಗರದ ಕಲಾಮಂದಿರ ಕಲಾಶಾಲೆಯ ಶತಮಾನೋತ್ಸವ ಗೌರವ ಪ್ರಶಸ್ತಿಗೆ ಸರೋದ್ ವಾದಕ ರಾಜೀವ ತಾರಾನಾಥ್ ಆಯ್ಕೆಯಾಗಿದ್ದಾರೆ.

ಕಲಾಶಾಲೆಯು ಶತಮಾನೋತ್ಸವ ಪ್ರಯುಕ್ತ ಚಿತ್ರಕಲೆ, ಸಾಹಿತ್ಯ, ಸಂಗೀತ, ನೃತ್ಯ, ನಾಟಕ, ಸಿನಿಮಾ ಕುರಿತ ಕಾರ್ಯಕ್ರಮಗಳನ್ನು ಪ್ರತಿ ತಿಂಗಳು ಹಮ್ಮಿಕೊಳ್ಳುತ್ತಿದೆ. ಶತಮಾನೋತ್ಸವದ ಸಮಾರೋಪವು ಆ.24 ಮತ್ತು 25ರಂದು ನಡೆಯಲಿದೆ. ₹1ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡ ಪ್ರಶಸ್ತಿಯನ್ನು ಆ. 25ರಂದು ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಗೌರವ ಪ್ರಶಸ್ತಿಗೆ ವಿವಿಧ ಕಲಾ ಪ್ರಕಾರಗಳ ಬಗ್ಗೆ ತಿಳಿವಳಿಕೆಯುಳ್ಳ ವ್ಯಕ್ತಿಯನ್ನು ಆಯ್ಕೆ ಮಾಡುವ ಸಲುವಾಗಿ ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು.

ಕಲಾವಿದ ಅ.ನ. ಸುಬ್ಬರಾಯ ಅವರು ಮಹಾತ್ಮ ಗಾಂಧಿ ಹಾಗೂ ಸರ್.ಎಂ. ವಿಶ್ವೇಶ್ವರಯ್ಯ ಅವರ ಪ್ರೇರಣೆಯಿಂದ 1919ರ ಆ.12ರಂದು ಕಲಾಮಂದಿರ ಕಲಾಶಾಲೆಯನ್ನು ಆರಂಭಿಸಿದ್ದರು. ಈ ಸಂಸ್ಥೆಯು ರಾಜ್ಯದ ಮೊದಲ ಕಲಾಶಾಲೆ ಎಂಬ ಹಿರಿಮೆಗೆ ಭಾಜನವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.