ರಾಮನಗರ: ಕನಕಪುರ ತಹಶೀಲ್ದಾರ್ ಆನಂದಯ್ಯ ಅವರನ್ನು ರಾಜ್ಯ ಸರ್ಕಾರ ಸೋಮವಾರ ವರ್ಗಾವಣೆ ಮಾಡಿದೆ. ಅವರ ಜಾಗಕ್ಕೆ ಯಳಂದೂರು ತಹಶೀಲ್ದಾರ್ ವರ್ಷ ಅವರನ್ನು ನೇಮಿಸಿದೆ.

ಕನಕಪುರ ತಾಲ್ಲೂಕಿನ ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ವಿವಾದದ ವರದಿ ನೀಡುವಂತೆ ರಾಜ್ಯ ಸರ್ಕಾರ ರಾಮನಗರ ಜಿಲ್ಲಾಡಳಿತಕ್ಕೆ ಸೂಚಿಸಿತ್ತು. ಅದರಂತೆ ಕನಕಪುರ ತಹಶೀಲ್ದಾರ್ ಆನಂದಯ್ಯ ಶನಿವಾರ ಸ್ಥಳ ಪರಿಶೀಲನೆ ನಡೆಸಿದ್ದರು. ಜಿಲ್ಲಾಡಳಿತದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ ಆಗುವ ಮುನ್ನವೇ ವರ್ಗಾವಣೆ ಆದೇಶ ಹೊರಬಿದ್ದಿದೆ.

ಆನಂದಯ್ಯ ಡಿ.ಕೆ. ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು, ಅವರ ವರ್ಗಾವಣೆಗೆ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಬಿಜೆಪಿ ವಕ್ತಾರ ಅಶ್ವತ್ಥ ನಾರಾಯಣ ಈಚೆಗೆ ಸುದ್ದಿ ಗೋಷ್ಠಿಯಲ್ಲಿ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.