ಬೆಂಗಳೂರು ಮಹಾನಗರಕ್ಕೆ ಹೆಚ್ಚು ಸೌಲಭ್ಯ ನೀಡಿ, ಹಿಂದುಳಿದ ಪ್ರದೇಶಗಳ ಮಹಾನಗರಗಳನ್ನು ಅಭಿವೃದ್ಧಿ ಪಡಿಸುವಲ್ಲಿ ಬಜೆಟ್‌ನಲ್ಲಿ ಅಷ್ಟೊಂದು ಆಸಕ್ತಿ ತೋರಿಸಿಲ್ಲ. ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಸಿದ್ಧತೆಯಲ್ಲಿ ಕೆಲವು ಮಹಾನಗರ ಪಾಲಿಕೆಗಳಿಗೆ ₹ 125 ಕೋಟಿ ಕೊಟ್ಟರೆ, ಇನ್ನು ಕೆಲವಕ್ಕೆ ₹ 150 ಕೋಟಿ ಅನುದಾನ ನೀಡಲಾಗಿದೆ. ಆದರೆ, ನವ ಬೆಂಗಳೂರು ಕ್ರಿಯಾ ಯೋಜನೆ ಅನುಷ್ಠಾನಕ್ಕಾಗಿ ಬಿಬಿಎಂಪಿಗೆ ₹ 2,300 ಕೋಟಿ ಅನುದಾನ ನೀಡಲಾಗಿದೆ.

ಹುಬ್ಬಳ್ಳಿ–ಧಾರವಾಡವು ಬೆಂಗಳೂರು ನಂತರ ರಾಜ್ಯದ ಎರಡನೇ ದೊಡ್ಡ ಪಟ್ಟಣವಾಗಿದೆ. ಅದರೆ, ಇಲ್ಲಿನ ಸಂಪೂರ್ಣ ಅಭಿವೃದ್ಧಿಯ ಕಡೆಗೆ ಗಮನ ಹರಿಸಿಲ್ಲ. ಮಹದಾಯಿ ಯೋಜನೆ ಜಾರಿಗೆ ಕ್ರಮ ಕೈಗೊಂಡಿಲ್ಲ. ಒಟ್ಟಾರೆ, ಪ್ರಾದೇಶಿಕ ಅಸಮತೋಲನ ನಿವಾರಿಸುವಲ್ಲಿ ನಿರೀಕ್ಷಿಸಿದಷ್ಟು ಅನುದಾನ ಸಿಕ್ಕಿಲ್ಲ.

ರಾಜ್ಯ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಸಮಾನತೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಆಗುತ್ತಿರುವ ಪ್ರಯತ್ನ ಸಾಕಾಗುತ್ತಿಲ್ಲ. ಉತ್ತರ ಕರ್ನಾಟಕದ 13 ಜಿಲ್ಲೆಗಳ ಪೈಕಿ 11 ಮತ್ತು ದಕ್ಷಿಣ ಕರ್ನಾಟಕದ 17 ಜಿಲ್ಲೆಗಳ ಪೈಕಿ ನಾಲ್ಕು ಜಿಲ್ಲೆಗಳು ಹಿಂದುಳಿದಿವೆ. ಡಾ. ನಂಜುಂಡಪ್ಪ ವರದಿ (2000) ಪ್ರಕಾರ ರಾಜ್ಯದಲ್ಲಿ 114 ತಾಲ್ಲೂಕುಗಳು ಹಿಂದುಳಿದಿವೆ. ಅವುಗಳ ಅಭಿವೃದ್ಧಿಗಾಗಿ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಅಭಿವೃದ್ಧಿಗೆ 40:60ರ ಅನುಪಾತದಲ್ಲಿ 2003ರಿಂದ 2010ರ ವರೆಗೆ ₹ 16 ಸಾವಿರ ಕೋಟಿ ಹಣವನ್ನು ಎಂಟು ವರ್ಷದ ಅವಧಿಗೆ ವಿಶೇಷ ಅಭಿವೃದ್ಧಿ ಅನುದಾನದ ಯೋಜನೆ (ಎಸ್‌ಡಿಪಿ) ಅಡಿ ನೀಡಲಾಗಿತ್ತು. ಅದರ ಪ್ರಕಾರ ಎಸ್‌ಡಿಪಿ ಯೋಜನೆಯನ್ನು ಕರ್ನಾಟಕ ಸರ್ಕಾರ 2007–08ರಲ್ಲಿ ಜಾರಿಗೆ ತಂದಿತು. 2008–09ರಿಂದ 2015–16ರ ವರೆಗೆ ಸರ್ಕಾರ, ಯೋಜನೆಯ ಶೇ 50ರಷ್ಟು ಹಣವನ್ನು ಮಾತ್ರ ಅಭಿವೃದ್ಧಿಗಾಗಿ ವ್ಯಯ ಮಾಡಿದೆ!

2015–16ರ ನಂತರ ಮತ್ತೆ ಐದು ವರ್ಷಗಳವರೆಗೆ ಎಸ್‌ಡಿಪಿ ಯೋಜನೆ ಮುಂದುವರಿಸಲಾಯಿತು. ಪ್ರತಿ ವರ್ಷ ₹ 3,000 ಕೋಟಿ ಹಂಚಿಕೆ ಮಾಡಿದರೂ, ಹಂಚಿಕೆಯ ಶೇ 35ರಷ್ಟು ಮಾತ್ರಖರ್ಚು ಆಗಿದೆ. ಅಂದರೆ, ಸರ್ಕಾರ ಪ್ರಾದೇಶಿಕ ಅಸಮತೋಲನ ನಿವಾರಿಸಲು ತೊಡಗಿಸಬೇಕಾದ ಬಂಡವಾಳ ತೊಡಗಿಸಲಿಲ್ಲ.
ಇತ್ತೀಚಿನ ಸಿಎಜಿ ವರದಿ ಪ್ರಕಾರ ರಾಜ್ಯ ಸರ್ಕಾರ ಪ್ರಾದೇಶಿಕ ಅಸಮಾನತೆ ಸರಿಪಡಿಸುವಲ್ಲಿವಿಫಲವಾಗಿದೆ. 2006–14ರ ಅವಧಿಯಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವಲ್ಲಿ ಹಿಂದುಳಿದ ತಾಲ್ಲೂಕುಗಳನ್ನು ಕಡೆಗಣಿಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಈ ಬಜೆಟ್‌ನಲ್ಲಿ, ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಯಾವುದೇ ನೇರ ಯೋಜನೆಯ ಪ್ರಸ್ತಾವ ಆಗಿಲ್ಲ. ಆದರೂ, ಹಲವು ಯೋಜನೆಗಳನ್ನು ಪರೋಕ್ಷವಾಗಿ ನೀಡಿರುವುದು ಅಭಿವೃದ್ಧಿಗೆ ಸ್ವಲ್ಪ ಮಟ್ಟಿಗೆ ಪೂರಕವಾಗಿದೆ.

ಎಸ್‌ಡಿಪಿ ಅಡಿಯಲ್ಲಿ ₹ 3,010 ಕೋಟಿ ಮೀಸಲಿಡಲಾಗಿದೆ. ಇದರೊಂದಿಗೆ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ₹ 1,500 ಕೋಟಿ, ಮಲೆನಾಡು ಅಭಿವೃದ್ಧಿಗೆ ಪ್ರಾಧಿಕಾರಕ್ಕೆ ₹ 70 ಕೋಟಿ, ಬಯಲುಸೀಮೆ ಅಭಿವೃದ್ಧಿ ಪ್ರಾಧಿಕಾರಕ್ಕೆ ₹ 90 ಕೋಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹ 30 ಕೋಟಿ ಮೀಸಲಿಡಲಾಗಿದೆ. ಇದರೊಂದಿಗೆ ₹ 600 ಕೋಟಿ ಹಣ ಶಾಸಕರ ಸ್ಥಳೀಯ ಅಭಿವೃದ್ಧಿ ನಿಧಿಗೆ ಕೊಡಲಾಗಿದೆ.

ಜಲಸಂಪನ್ಮೂಲ ಇಲಾಖೆಗೆ ನೀಡಿದ ₹ 17,200 ಕೋಟಿ ಅನುದಾನದಲ್ಲಿ ಏತ ನೀರಾವರಿ ಯೋಜನೆ, ಕೆರೆ ತುಂಬಿಸುವ ಯೋಜನೆ, ಕೆರೆಗಳ ಸಮಗ್ರ ಅಭಿವೃದ್ಧಿ ಯೋಜನೆ, ನೀರಾವರಿ, ಕಾಲುವೆ ಅಭಿವೃದ್ಧಿ, ಬ್ರಿಡ್ಜ್ ಮತ್ತು ಬ್ಯಾರೇಜ್ ನಿರ್ಮಾಣ, ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಇದು ಉತ್ತರ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ಅಲ್ಪ ಮಟ್ಟಿಗೆ ಅನುಕೂಲವಾಗುವ ನಿರೀಕ್ಷೆಯಿದೆ.

ರಾಯಚೂರು, ಹಾವೇರಿ, ಕಲಬುರ್ಗಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯಕ್ಕೆ ₹ 15 ಕೋಟಿ ನೀಡಿದ್ದು ಹಿಂದುಳಿದ ಪ್ರದೇಶಗಳ ಮಹಿಳಾ ಸಬಲೀಕರಣಕ್ಕೆ ಸಹಾಯಕವಾಗಬಹುದು.

ಲೇಖಕ: ಅರ್ಥಶಾಸ್ತ್ರದ ನಿವೃತ್ತ ಪ್ರಾಧ್ಯಾಪಕರು, ಕ.ವಿ.ವಿ. ಧಾರವಾಡ

* ಇವನ್ನೂ ಓದಿ...

*ಸಣ್ಣ ನೀರಾವರಿ, ಅಂತರ್ಜಲ ವೃದ್ಧಿಗೆ ಆದ್ಯತೆ

* ‘ಉಕ್ಕುವ ಹಾಲಿಗೆ ನೀರು ಚಿಮುಕಿಸಿದಂತೆ’

*ಅನ್ನದಾತನಿಗೆ ಹತ್ತಾರು ಯೋಜನೆ, ರಾಜ್ಯದಲ್ಲಿ ಪ್ರತ್ಯೇಕ ಬೆಳೆ ವಿಮೆ ಯೋಜನೆ

*ಬಜೆಟ್: ಯಾರು ಏನಂತಾರೆ?

*ಉದ್ಯಮ ವಲಯಕ್ಕೆ ಉತ್ತೇಜಕ ಬುತ್ತಿ

*ಬಜೆಟ್: ಪರಿಶಿಷ್ಟ ವರ್ಗಕ್ಕೆ ಭರ್ಜರಿ ಕೊಡುಗೆ

*ಸರ್ಕಾರ ಜನರ ಕಣ್ಣಿಗೆ ಮಣ್ಣೆರಚಿದೆ: ಯಡಿಯೂರಪ್ಪ

*ಸಾಲ ಮನ್ನಾಕ್ಕೆ ಇನ್ನೂ ಹಣ ಕೊಡುವೆ: ಕುಮಾರಸ್ವಾಮಿ

*ಬೆಂಗಳೂರೇ ಮೊದಲು; ಉಳಿದವು ನಂತರ...

*ಪ್ರತಿಭಟನೆ ಮಧ್ಯೆಯೇ ಬಜೆಟ್ ಭಾಷಣ

*ಬಜೆಟ್‌ನಲ್ಲಿ ಜಿಲ್ಲಾವಾರು ಹಂಚಿಕೆ; ಸಮತೋಲನದ ಸರ್ಕಸ್

*ಬರ ಪರಿಸ್ಥಿತಿ: ಆರ್ಥಿಕ ವೃದ್ಧಿ ದರ ಕುಸಿತ

*ಮತ ಫಸಲಿಗಾಗಿ ಕುಮಾರ ಬಿತ್ತನೆ

*ವಿಶ್ವವಿಖ್ಯಾತ ತಾಣವಾಗಿ ಬಾದಾಮಿ ಅಭಿವೃದ್ಧಿ

*ಸಹಸ್ರ ಶಾಲೆಗಳ ಸ್ಥಾಪನೆ

*ಸ್ವಾಮೀಜಿ ಊರುಗಳಲ್ಲಿ ಸಾಂಸ್ಕೃತಿಕ ಕೇಂದ್ರಗಳು

*ಹೊಸ ಕ್ರೀಡಾ ವಸತಿ ನಿಲಯಗಳ ಘೋಷಣೆ

*ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ ಆದ್ಯತೆ

*‘ಮಾತೃಶ್ರೀ’ ಯೋಜನೆ ಸಹಾಯಧನ ಹೆಚ್ಚಳ

*ಆನ್‌ಲೈನ್ ಮೂಲಕ ಸಿಇಟಿ, ವಿದ್ಯಾರ್ಥಿಗಳಿಗೆ ಡಿಜಿಟಲ್ ಅಂಕಪಟ್ಟಿ

*ಬಜೆಟ್‌ನಲ್ಲಿ ಮಠಮಾನ್ಯಗಳ ತೃಪ್ತಿಪಡಿಸುವ ಯತ್ನ

*ಬಜೆಟ್: ಯಾರು ಏನಂತಾರೆ?

*ಚಲನಶೀಲ ಬೆಂಗಳೂರಿಗೆ ‘ಮತ್ತೊಂದು ಕಾವೇರಿ’

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.