ಬೆಂಗಳೂರು:ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ಪೀಕರಿಸುತ್ತಿದ್ದಂತೆ ಬಿ.ಎಸ್.ಯಡಿಯೂರಪ್ಪ ಅವರು ರೈತರು ಮತ್ತು ನೇಕಾರರಿಗೆ ಮೊದಲ ಕೊಡುಗೆಯನ್ನು ಘೋಷಿಸಿದರು.

‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್’ ಯೋಜನೆಗೆ ಪೂರಕವಾಗಿ ಪ್ರತಿ ರೈತನಿಗೂ ಎರಡು ಕಂತುಗಳಲ್ಲಿ ₹ 4,000 ನೀಡಲಾಗುವುದು ಎಂದು ಯಡಿಯೂರಪ್ಪ ಪ್ರಕಟಿಸಿದರು.

ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಅಲ್ಲಿಂದ ನೇರವಾಗಿ ವಿಧಾನಸೌಧಕ್ಕೆ ಬಂದ ಅವರು, ಸಚಿವ ಸಂಪುಟ ಸಭೆ ನಡೆಸಿ ತೀರ್ಮಾನ ತೆಗೆದುಕೊಂಡರು. ಸಭೆಯ ನಂತರ ಸುದ್ದಿಗಾರರಿಗೆ ಸಭೆಯ ನಿರ್ಧಾಗಳನ್ನು ತಿಳಿಸಿದರು.

ರೈತರಿಗೆ ರಾಜ್ಯ ಸರ್ಕಾರದಿಂದ ನೆರವು ನೀಡಲು ಕೈಗೊಂಡಿರುವ ಈ ನಿರ್ಧಾರದಿಂದ ಕೇಂದ್ರದ ₹6,000 ಸೇರಿ ವರ್ಷಕ್ಕೆ ₹10,000 ಸಿಗಲಿದೆ.

ನೇಕಾರರ ₹100 ಕೋಟಿ ಸಾಲ ಮನ್ನಾ

ಅಲ್ಲದೆ, 2019 ಫೆಬ್ರುವರಿ 30ರ ವರೆಗೆ ಬಾಕಿ ಉಳಿದಿರುವ ನೇಕಾರರ ₹100 ಕೋಟಿ ಸಾಲ ಮನ್ನಾ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

* ದ್ವೇಷದ ರಾಜಕಾರಣ ಮಾಡುವುದಿಲ್ಲ. ದೂಷಿಸಿದವರನ್ನೂ ಪ್ರೀತಿಯಿಂದ ಕಾಣುತ್ತೇನೆ. ನಿಂದಿಸಿದವರನ್ನು ಮರೆತು, ಕ್ಷಮಿಸುತ್ತೇನೆ
- ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

* ಇವನ್ನೂ ಓದಿ...

*ಬಿಜೆಪಿ ಸರ್ಕಾರ ರಚನೆಗೆ ರಾತ್ರೋ ರಾತ್ರಿ ಶಾ ಒಪ್ಪಿದ್ದು ಏಕೆ?

*ಹೋರಾಟದ ಮೂಸೆಯಲ್ಲಿ ರೂಪುಗೊಂಡ ಯಡಿಯೂರಪ್ಪ

*ಯಡಿಯೂರಪ್ಪ ಮುಖ್ಯಮಂತ್ರಿ; ನಾಲ್ಕನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ

*ಇನ್ನು ಮುಂದೆ ಅಭಿವೃದ್ಧಿ ಪರ್ವ: ಬಿಎಸ್ವೈ ಭರವಸೆ

*ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಜೆಡಿಎಸ್ ಶಾಸಕರ ಒಲವು?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.