ಮಂಗಳೂರು: ತನಗೆ ಕೋವಿಡ್ - 19 ಸೋಂಕು ತಗಲಿರಬಹುದು ಎಂದು ಸಂಶಯಗೊಂಡು, ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಬಂಟ್ವಾಳ ತಾಲ್ಲೂಕಿನ ಮೇರಮಜಲು ಗ್ರಾಮದ ಅಬ್ಬೆಟ್ಟು ನಿವಾಸಿ ಸದಾಶಿವ ಶೆಟ್ಟಿ (56) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗಿನ ಅವಧಿಯಲ್ಲಿ ಮನೆಯ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪತ್ನಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್, ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿರುವ ತನಗೂ ತಗುಲಿರಬಹುದು ಎಂದು ಭಯಗೊಂಡಿದ್ದ ಅವರು, ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ತನಗೆ ರೋಗ ತಗುಲಿದ್ದಲ್ಲಿ ತನ್ನಿಂದಾಗಿ ಮನೆಯವರಿಗೂ ಹರಡಬಹುದು ಎಂದು ಭೀತಿಗೊಂಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ...ಕೊರೊನಾ ಭೀತಿ: ಸಾಮಾಜಿಕ ಮಾಧ್ಯಮಗಳ ವದಂತಿಗಳಿಂದ ಹೆದರಿ ವ್ಯಕ್ತಿ ಆತ್ಮಹತ್ಯೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.