ಬೆಂಗಳೂರು: ಟಿಪ್ಪು ಸುಲ್ತಾನ್ ಕುರಿತಾದ ವಿಷಯವನ್ನು ಪಠ್ಯದಲ್ಲಿಉಳಿಸಿಕೊಳ್ಳುವ ಅಥವಾ ಪಠ್ಯದಿಂದ ತೆಗೆದುಹಾಕುವ ಕುರಿತು ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಮಡಿಕೇರಿ ವಿಧಾನಸಭಾ ಸದಸ್ಯ ಅಪ್ಪಚ್ಚು ರಂಜನ್ ಅವರು ಟಿಪ್ಪು ಸುಲ್ತಾನ್ ಕುರಿತಾದ ಪಠ್ಯವನ್ನು ತೆಗೆದು ಮುಂದಿನ ಪೀಳಿಗೆಗೆ ದೇಶಪ್ರೇಮ, ರಾಷ್ಟ್ರಭಕ್ತಿ ಮೂಡಿಸುವ ಪಠ್ಯವನ್ನು ಅಳವಡಿಸಬೇಕೆಂದು ಶಿಕ್ಷಣ ಸಚಿವರಿಗೆ ಮನವಿಸಲ್ಲಿಸಿದ್ದರು.

ಈ ಮನವಿಯನ್ನು ಪುರಸ್ಕರಿಸಿದ ಸಚಿವ ಸುರೇಶ್ ಕುಮಾರ್ ಅವರು, ಇತಿಹಾಸಪುಸ್ತಕದ ಟಿಪ್ಪು ಸುಲ್ತಾನ್ ವಿಷಯದಕುರಿತು ಇತಿಹಾಸ ಪಠ್ಯಪುಸ್ತಕ ರಚನಾ ಸಮಿತಿ ಸಭೆಯನ್ನು ಕರೆದು ಆ ಸಭೆಗೆ ಶಾಸಕರಾದ ಶ್ರೀ ಅಪ್ಪಚ್ಚು ರಂಜನ್ ಅವರನ್ನೂ ಆಹ್ವಾನಿಸಬೇಕು. ಅಲ್ಲದೆಈ ಪಠ್ಯದ ಅಗತ್ಯತೆ ಹಾಗೂ ಅದನ್ನು ಉಳಿಸಿಕೊಳ್ಳುವ ಇಲ್ಲವೇ ತೆಗೆದುಹಾಕುವ ಕುರಿತು ಸಾಧಕ ಬಾಧಕಗಳ ಕುರಿತಂತೆ ಮೂರು ದಿನಗಳಲ್ಲಿ ವರದಿ ಸಲ್ಲಿಸಲು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.