ಬೆಳಗಾವಿ: ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾದ ಬೆಳಗಾವಿ ಲೋಕಸಭಾ ಕ್ಷೇತ್ರದ ಸುರೇಶ ಅಂಗಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ.

ಬೆಳಗಾವಿ ತಾಲ್ಲೂಕಿನ ಕೊಂಡಸಕೊಪ್ಪ ಗ್ರಾಮದ ಚನ್ನಬಸಪ್ಪ ಹಾಗೂ ಸೋಮವ್ವ ದಂಪತಿಯ ಮಗನಾಗಿ1955ರ ಜೂನ್1ರಂದು ಜನ್ಮತಾಳಿದರು.ಬೆಳಗಾವಿಯ ಎಸ್.ಎಸ್.ಎಸ್.ಸಮಿತಿ ಕಾಲೇಜಿನಲ್ಲಿ ಬಿ.ಕಾಂ ಪದವಿ,ರಾಜಾ ಲಖಮಗೌಡ ಲಾ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದಾರೆ.ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಸಿಮೆಂಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು.

ಇದನ್ನೂ ಓದಿ...ಸದಾನಂದ ಗೌಡ, ಸುರೇಶ ಅಂಗಡಿ, ಜೋಶಿಗೆ ಒಲಿದ ಸಚಿವ ಸ್ಥಾನ

ಜಿಲ್ಲಾ ಮಟ್ಟದಲ್ಲಿ ಬಿಜೆಪಿ ಕಟ್ಟುವಲ್ಲಿ ಸಾಕಷ್ಟು ಶ್ರಮಿಸಿದರು. 1996ರಲ್ಲಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ನೇಮಕವಾದರು.ಮೂರು ವರ್ಷಗಳ ಕಾಲ ಕಾರ್ಯನಿರ್ವಹಿಸಿದರು. 2001ರಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಹುದ್ದೆಗೇರಿದರು. 2004ರಲ್ಲಿ ಮೊಟ್ಟ ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ,ಆಯ್ಕೆಯಾದರು. 2009, 2014ಹಾಗೂ2019ರಲ್ಲಿ ನಿರಂತರ ಜಯ ದಾಖಲಿಸಿದರು.
ಪತ್ನಿ ಮಂಗಳಾ ಹಾಗೂ ಸ್ಪೂರ್ತಿ ಹಾಗೂ ಶ್ರದ್ಧಾ ಇಬ್ಬರು ಪುತ್ರಿಯರು ಇದ್ದಾರೆ.

ಇದನ್ನೂ ಓದಿ...ಧಾರವಾಡ ಸಂಸದ ಪ್ರಹ್ಲಾದ ಜೋಶಿಗೆ ಒಲಿದ ಸಚಿವ ಸ್ಥಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.