ಬೆಂಗಳೂರು/ಚೆನ್ನೈ: ಗಾಜಾ ಚಂಡಮಾರುತದ ಪರಿಣಾಮ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

‘ಗಾಜಾ ಪರಿಣಾಮವಾಗಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ತಮಿಳುನಾಡಿನ ಕರಾವಳಿ ಪ್ರದೇಶದಲ್ಲಿ ಬುಧವಾರ ದಿಂದಲೇ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ಕರಾವಳಿಯಾದ್ಯಂತ ಇದೇ ರೀತಿ ಮಳೆಯಾಗಬಹುದು’ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಹೇಳಿದರು.

‘ಬೆಂಗಳೂರು, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿಯೂ ಎರಡು ದಿನಗಳ ಕಾಲ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ’ ಎಂದು ತಿಳಿಸಿದರು.

‘ದಕ್ಷಿಣ ಒಳನಾಡಿನಲ್ಲಿ ಎರಡು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ’ ಎಂದು ರಾಜ್ಯ ಪ್ರಕೃತಿ ವಿಕೋಪ ನಿಗಾ ಘಟಕದ ನಿರ್ದೇಶಕ ಜಿ.ಎಸ್.ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.