ಬೆಂಗಳೂರು: ಮೇರು ನಟರಾದ ದಿ.ರಾಜ್‌ಕುಮಾರ್, ವಿಷ್ಣುವರ್ಧನ್ ಹಾಗೂ ಅಂಬರೀಷ್ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೆಪಿಸಿಸಿ ಕಾನೂನು ಮತ್ತು ಮಾನವ ಹಕ್ಕು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಭಾನುವಾರ ಸೈಬರ್ ಕ್ರೈಂ ಠಾಣೆಗೆ ದೂರು ಕೊಟ್ಟಿದ್ದಾರೆ.

‘ನಟ ಅಂಬರೀಷ್ ಶನಿವಾರ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಇಡೀ ರಾಜ್ಯವೇ ಶೋಕ ಸಾಗರದಲ್ಲಿ ಮುಳುಗಿದೆ. ಇಂಥ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ‘ದುಷ್ಟಸಂಹಾರ’ ಹೆಸರಿನಲ್ಲಿ ನಕಲಿ ಖಾತೆ ತೆರೆದು, ಅದರಲ್ಲಿ ಮೂವರು ಹಿರಿಯ ನಟರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ’ ಎಂದು ದೂರಿನಲ್ಲಿ ವಿವರಿಸಿದ್ದಾರೆ.

‘ಆ ಪೋಸ್ಟ್‌ಗಳನ್ನು ಹಲವರಿಗೆ ಶೇರ್ ಮಾಡಿ ನಟರ ಗೌರವಕ್ಕೆ ಧಕ್ಕೆ ತರಲು ಯತ್ನಿಸಿದ್ದಾರೆ’

‘ದುಷ್ಟಸಂಹಾರ, ದೀಪಕ್ ದೇವಯ್ಯ, ಅರ್ಪಿತಾ ಭಟ್ ಹಾಗೂ ಅಬ್ದುಲ್ಲಾ ಮಂಗಳೂರ್ ಎಂಬ ಖಾತೆಗಳಿಂದ ವಿಕೃತ ಪೋಸ್ಟ್‌ಗಳು ಹರಿದಾಡಿವೆ. ಹೀಗಾಗಿ, ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಮುಕುಂದರಾಜ್ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.