ಉಡುಪಿ: ಉಡುಪಿಯ ಅಷ್ಟಮಠಗಳ ಪೈಕಿ ಒಂದಾದ ಪುತ್ತಿಗೆ ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಕ ಮಾಡಲಾಗಿದ್ದು, ಹಿರಿಯಡ್ಕ ಸಮೀಪದ ಪುತ್ತಿಗೆ ಗ್ರಾಮದ ಮೂಲಮಠದಲ್ಲಿ ಸೋಮವಾರ ಬೆಳಿಗ್ಗೆ 11.45ಕ್ಕೆ ಶಿಷ್ಯ ಸ್ವೀಕಾರ ಸಮಾರಂಭ ನಡೆಯಲಿದೆ.

‘ಪ್ರಶಾಂತ ಆಚಾರ್ಯ ಎಂಬ ವಟು ಪುತ್ತಿಗೆ ಮಠದ ಉತ್ತರಾಧಿಕಾರಿಯಾಗಲಿದ್ದಾರೆ. ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು ಸನ್ಯಾಸ ಸ್ವೀಕರಿಸಿ 45 ಸಂವತ್ಸರಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಶಿಷ್ಯ ಸ್ವೀಕಾರ ನಡೆಯುತ್ತಿರುವುದು ವಿಶೇಷ’ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.

ಯತಿಗಳ ಗೈರು?

ಈ ಸಮಾರಂಭದಲ್ಲಿ ಅಷ್ಟಮಠಗಳ ಯತಿಗಳು ಭಾಗವಹಿಸುವುದು ಅನುಮಾನವಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ.‘ದ್ವಂದ್ವ
ಮಠವಾದ ಕೃಷ್ಣಾಪುರ ಮಠದ ಶ್ರೀಗಳು ಮಾತ್ರ ಭಾಗವಹಿಸಲಿದ್ದಾರೆ’ ಎಂದು ಪುತ್ತಿಗೆ ಶ್ರೀಗಳು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.