ಕನ್ನಡಕ್ಕೆ ಕುಠಾರಸ್ವಾಮಿ ಆಗಬೇಡಿ: ಮುಖ್ಯಮಂತ್ರಿಗೆ ಪ್ರೊ.ಚಂದ್ರಶೇಖರ ಪಾಟೀಲ ಆಗ್ರಹ
‘ಕನ್ನಡವೆಂಬುದು ಸಾವಿರಾರು ವರ್ಷಗಳಿಂದ ಬೆಳೆದು ಬಂದಿರುವ ಒಂದು ಬೃಹತ್ ವೃಕ್ಷ. ನಮ್ಮ ಪ್ರೀತಿಯ ಮುಖ್ಯಮಂತ್ರಿಯವರಾದ ಎಚ್.ಡಿ.ಕುಮಾರಸ್ವಾಮಿ ಅವರು ಕನ್ನಡ ವೃಕ್ಷದ ಪಾಲಿಗೆ ಎಂದಿಗೂ ‘ಕುಟಾರಸ್ವಾಮಿ’ ಆಗಬಾರದು’ ಎಂದು ನಿಕಟಪೂರ್ವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ ಆಗ್ರಹಿಸಿದರು.
ಶುಕ್ರವಾರ ಇಲ್ಲಿ ಆರಂಭವಾದ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, 1000 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶಿಕ್ಷಣ ಆರಂಭಿಸುವ ರಾಜ್ಯ ಸರ್ಕಾರದ ತೀರ್ಮಾನವನ್ನು ಪ್ರಬಲವಾಗಿ ವಿರೋಧಿಸಿದರು. ಈ ವಿಷಯದಲ್ಲಿ ಸರ್ಕಾರದ ಖಚಿತ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸುವಂತೆ ಆಗ್ರಹಿಸಿದರು.Last Updated 5 ಜನವರಿ 2019, 6:37 IST