ಪಶ್ಚಿಮ ಘಟ್ಟ | ಪರಿಸರ ಸೂಕ್ಷ್ಮ ಪ್ರದೇಶ: ಕರಡು ಅಧಿಸೂಚನೆಯಲ್ಲಿ ಏನಿದೆ?
ನೈಸರ್ಗಿಕ ಪಾರಂಪರಿಕ ಪ್ರದೇಶಗಳು ಎಂದು ಯುನೆಸ್ಕೊ ಪಟ್ಟಿ ಮಾಡಿರುವ ಪ್ರದೇಶಗಳನ್ನೂ ಹೊಂದಿರುವ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಕರಡು ಅಧಿಸೂಚನೆಯನ್ನು ಕೇಂದ್ರ ಸರ್ಕಾರವು ಜುಲೈ 6ರಂದು ಪ್ರಕಟಿಸಿದೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು 2018ರ ಅಕ್ಟೋಬರ್ 3ರಂದು ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ. ಸಾರ್ವಜನಿಕರು ಆಕ್ಷೇಪಗಳನ್ನು ಸಲ್ಲಿಸಲು ಅಧಿಸೂಚನೆ ಪ್ರಕಟವಾದ ದಿನದಿಂದ 60 ದಿನಗಳವರೆಗೆ ಅವಕಾಶ ಇದೆ. ಸೆಪ್ಟೆಂಬರ್ 3ಕ್ಕೆ ಈ ಗಡುವು ಕೊನೆಗೊಳ್ಳಲಿದೆ. ಕರಡು ಅಧಿಸೂಚನೆ ಪ್ರಕಾರ, ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಏನು ಮಾಡಬಾರದು, ಏನು ಮಾಡಬಹುದು ಎಂಬುದರ ವಿವರ ಇಲ್ಲಿದೆLast Updated 31 ಜುಲೈ 2022, 20:00 IST