ತಂತ್ರಜ್ಞಾನ ಮತ್ತು ಸಾಮಾಜಿಕ ಜವಾಬ್ದಾರಿ ಕೈ ಹಿಡಿದು ಸಾಗಬೇಕು: ಡಾ. ಆರ್.ಪೂರ್ಣಿಮಾ
"ಕಾಲದ ಜೊತೆ ನಾವೆಲ್ಲರೂ ಹೆಜ್ಜೆ ಹಾಕಲೇ ಬೇಕು. ಅದಕ್ಕೆ ತಂತ್ರಜ್ಞಾನದ ನೆರವು ಅತ್ಯಗತ್ಯ.
ನಮ್ಮ ಜೀವನದ ಭಾಗವಾಗಿರುವ ತಂತ್ರಜ್ಞಾನ, ನಮ್ಮ ಚಿಂತನೆಯ ಕೀಲಿಕೈ ಕೂಡ ಆಗಿರುತ್ತದೆ. ಸಮಾಜದ ಜೊತೆ ಸಂವಾದಕ್ಕೆ ಸಾಧನವೂ ಆಗಿರುತ್ತದೆ. ಆದ್ದರಿಂದ ಅದನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು.
ತಂತ್ರಜ್ಞಾನ ಮತ್ತು ಸಾಮಾಜಿಕ ಜವಾಬ್ದಾರಿ ಎರಡೂ ಕೈಹಿಡಿದು ಸಾಗಬೇಕು." ಎಂದು ಹಿರಿಯ ಪತ್ರಕರ್ತೆ, ಲೇಖಕಿ ಮತ್ತು ಪ್ರಕಾಶಕಿ ಡಾ. ಆರ್. ಪೂರ್ಣಿಮಾ ಹೇಳಿದರು.Last Updated 20 ಫೆಬ್ರುವರಿ 2021, 10:33 IST