ನವದೆಹಲಿ: ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಕಂಪನಿಗಳಲ್ಲಿ ಮುಂಚೂಣಿಯಲ್ಲಿರುವ ಐಟೆಲ್ (Itel) ಸಂಸ್ಥೆ ಇದೀಗ ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ.

ಹೊಸ ಸ್ಮಾರ್ಟ್‌ಫೋನ್ ಬೆಲೆ ₹14,999. ಈ ಫೋನ್ USP 3D ಬಾಗಿದ ಡಿಸ್‌ಪ್ಲೇಯನ್ನು ಹೊಂದಿದ್ದು, ಆಕರ್ಷಕ ಕ್ಯಾಮೆರಾ, ಉತ್ತಮ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್ಗಳನ್ನು ಒಳಗೊಂಡಿರಲಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳ ವಿಭಾಗದಲ್ಲಿ ಐಟೆಲ್ ಕಂಪನಿಯು (Itel S23) ಈಚೆಗೆ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಮೊಬೈಲ್‌ಗಳನ್ನು ಬಿಡುಗಡೆ ಮಾಡಿತ್ತು. 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ ಕೇವಲ ₹8,799 ರಷ್ಟಿದರೆ, 4GB RAM + 128GB ಫೋನ್‌ಗೆ ₹8,469 ರಷ್ಟಿತ್ತು. ಈ ಸ್ಮಾರ್ಟ್‌ಫೋನ್ ಮಿಸ್ಟರಿ ವೈಟ್ ಮತ್ತು ಸ್ಟಾರಿ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಬಿಡುಗಡೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.