ನವದೆಹಲಿ: ಸ್ಯಾಮ್‌ಸಂಗ್ ಗ್ಯಾಲಕ್ಸಿ ‘ಎಸ್’ ಸರಣಿಯ ಹೊಸ ಸ್ಮಾರ್ಟ್‌ಫೋನ್ Samsung Galaxy S21 FE 5G ಮಂಗಳವಾರ ಭಾರತದಲ್ಲಿ ಬಿಡುಗಡೆಯಾಗಿದೆ.

ಗ್ಯಾಲಕ್ಸಿ S21 FE 5G ಫೋನ್ ಕಳೆದ ವರ್ಷವೇ ಬಿಡುಗಡೆ ಆಗಿತ್ತು. ಇದೀಗ ಬಿಡುಗಡೆಯಾಗಿರುವ ಹೊಸ ಆವೃತ್ತಿಯಲ್ಲಿ ಪ್ರೊಸೆಸರ್ ಅನ್ನು ಬದಲಾಯಿಸಲಾಗಿದೆ. ಉಳಿದಂತೆ ಬಹುತೇಕ ಫೀಚರ್ ಹಿಂದಿನ ಫೋನ್‌ನಂತೆಯೇ ಇದೆ.

ಡ್ಯುಯಲ್ (ಎರಡು) ಸಿಮ್ ಆಯ್ಕೆ ಹೊಂದಿರುವ ಗ್ಯಾಲಕ್ಸಿ S21 FE 5G ಫೋನ್ ಆಂಡ್ರಾಯ್ಡ್‌ನ ಅನಿರ್ದಿಷ್ಟ ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಗ್ಯಾಲಕ್ಸಿ S21 FE ಮಾದರಿಯಲ್ಲಿ ಎಕ್ಸಿನೋಸ್ 2100 SoC ಪ್ರೊಸೆಸರ್ ನೀಡಲಾಗಿತ್ತು. ಹೊಸ ಹ್ಯಾಂಡ್‌ಸೆಟ್ ಕ್ವಾಲ್‌ಕಾಮ್‌ನ ಸ್ನಾಪ್‌ಡ್ರಾಗನ್ 888 ಚಿಪ್‌ಸೆಟ್ ಮೂಲಕ ಕಾರ್ಯನಿರ್ವಹಿಸಲಿದೆ.

ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆಯೊಂದಿಗೆ 6.4 ಇಂಚಿನ ಪೂರ್ಣ HD+ ಡೈನಾಮಿಕ್ AMOLED 2X ಡಿಸ್ ಪ್ಲೇ ಅನ್ನು ಹೊಂದಿದೆ. 120Hz ರಿಫ್ರೆಶ್ ದರ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ದರವನ್ನು ಪಡೆದುಕೊಂಡಿದೆ. ಮೂಲ ಮಾದರಿಯಂತೆ ಈ ಹೊಸ ಮಾದರಿಯೂ 12 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 12-ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಕ್ಯಾಮೆರಾ ಮತ್ತು 8-ಮೆಗಾಪಿಕ್ಸೆಲ್ ಟೆಲಿಫೋಟೊ ಕ್ಯಾಮೆರಾವನ್ನು ಹೊಂದಿದೆ. ವಿಡಿಯೊ ಕರೆ ಮತ್ತು ಸೆಲ್ಫಿಗಾಗಿ 32– ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಒಳಗೊಂಡಿದೆ.

ಈ ಫೋನ್ 256GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ, ಇನ್-ಡಿಸ್ ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಇದರಲ್ಲಿ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 4,500mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. ಹ್ಯಾಂಡ್‌ಸೆಟ್ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ: ಈ ಸ್ಮಾರ್ಟ್‌ಫೋನ್ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಮಾರಾಟವಾಗುತ್ತಿದೆ. ಇದರ 8 GB RAM + 256 GB ಸ್ಟೋರೇಜ್ ವೇರಿಯಂಟ್ ಬೆಲೆ ₹49,999 ಆಗಿದೆ. ಈ ಫೋನ್ ಆಲಿವ್, ಗ್ರ್ಯಾಫೈಟ್, ಲ್ಯಾವೆಂಡರ್ ಮತ್ತು ನ್ಯೂ ನೇವಿ ಬ್ಲೂ ಕಲರ್ ಆಯ್ಕೆಗಳನ್ನು ಒಳಗೊಂಡಿದ್ದು, ಸ್ಯಾಮ್‌ಸಂಗ್ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಈಗಾಗಲೇ ಈ ಫೋನ್ ಖರೀದಿಗೆ ಲಭ್ಯವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.